Flight Crashes : ಕಝಾಕಿಸ್ತಾನದ ಅಕ್ಟೌ ನಗರದ ಬಳಿ 72 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದೆ. ಸ್ಥಳಕ್ಕಾಗಮಿಸಿದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಅಜರ್‌ಬೈಜಾನ್ ರಾಜಧಾನಿ ಬಾಕುದಿಂದ ರಷ್ಯಾಕ್ಕೆ ತೆರಳುತ್ತಿದ್ದ ಅಜರ್‌ಬೈಜಾನ್ ಏರ್‌ಲೈನ್ಸ್ ವಿಮಾನ ಅಪಘಾತಕ್ಕೀಡಾಗಿದೆ. ಸ್ಥಳಕ್ಕಾಗಮಿಸಿದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನವು ಅಜರ್‌ಬೈಜಾನ್‌ನ ಬಾಕುದಿಂದ ರಷ್ಯಾದ ಚೆಚೆನ್ಯಾ ರಾಜಧಾನಿ ಗ್ರೋಜ್ನಿಗೆ ಹೋಗುತ್ತಿತ್ತು. ಪಕ್ಷಿಗಳ ಹಿಂಡಿಗೆ ಡಿಕ್ಕಿ ಹೊಡೆದ ನಂತರ ವಿಮಾನಕ್ಕೆ ಹಾನಿಯಾಗಿದೆ.ಹಲವು ಬಾರಿ ಗಾಳಿಯಲ್ಲೆ ಸುತ್ತಿದ ನಂತರ, ತುರ್ತು ಭೂಸ್ಪರ್ಶ ಮಾಡಲು ಪ್ರಯತ್ನಿಸುವಾಗ ಅಪಘಾತ ಸಂಭವಿಸಿದೆ. ರನ್‌ವೇಗೆ ತಾಗುತ್ತಿದ್ದಂತೆಯೇ ವಿಮಾನದಿಂದ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ತುರ್ತು ಭೂಸ್ಪರ್ಶದ ವೇಳೆ ರನ್‌ವೇಯಲ್ಲಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಹಲವರು ಸತ್ತಿರುವ ಶಂಕೆಯಿದ್ದು, ಕೆಲವರು ಬದುಕುಳಿದಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ವಿಮಾನ ನೆಲಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಈ ಅಪಘಾತದ ಬಗ್ಗೆ ಅಜರ್‌ಬೈಜಾನ್ ಏರ್‌ಲೈನ್ಸ್‌ನಿಂದ ಯಾವುದೇ ಹೇಳಿಕೆಯನ್ನು ನೀಡಿಲ್ಲ.. ಸಾವು- ನೋವಿನ ಕುರಿತಾಗಿ ಮಾಹಿತಿ ತಿಳಿದು ಬರಬೇಕಿದೆ..