ನ್ಯೂಸ್

ಬಿಜೆಪಿ ಪರ ಸುದೀಪ್ ಪ್ರಚಾರದ ಬಗ್ಗೆ ಕಾಂಗ್ರೆಸ್ ಲೇವಡಿ ವಿಚಾರ: ಬಿಎಸ್​ವೈ ತಿರುಗೇಟು

ಬೆಂಗಳೂರು: ಬಿಜೆಪಿ ಪರ ನಟ ಸುದೀಪ್ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿರುವುದನ್ನು ಲೇವಡಿ ಮಾಡಿರುವ ಕಾಂಗ್ರೆಸ್​ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ತಿರುಗೇಟು ನೀಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, ಕಾಂಗ್ರೆಸ್​ನವರಿಗೆ ತಲೆಕೆಟ್ಟು ಏನು ಬೇಕಾದ್ರೂ ಮಾತಾಡ್ತಾರೆ. ಚಲನಚಿತ್ರದಲ್ಲಿ ಖ್ಯಾತಿ ಪಡೆದಿರುವ ವ್ಯಕ್ತಿ ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂದು ಹೇಳಿದ್ದಾರೆ. ನಾವು ಅದನ್ನು ಸ್ವಾಗತ ಮಾಡುತ್ತೇವೆ. ಬಿಜೆಪಿಯವರಿಗೆ ಸಿಕ್ಕಿರುವ ಬೆಂಬಲವನ್ನು ಕಾಂಗ್ರೆಸ್​ನವರಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದರು.

ಇದೇ ಸಂದರ್ಭದಲ್ಲಿ ವಿ.ಸೋಮಣ್ಣ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ಏನು ಹೇಳುತ್ತದೋ ಅದರಂತೆ ನಡೆಯುತ್ತದೆ ಎಂದು ಹೇಳಿದರು.

ಟಿಕೆಟ್ ಘೋಷಣೆ ಯಾವಾಗ ಎಂಬ ಪ್ರಶ್ನೆಗೆ ನಾಳೆ ಪಟ್ಟಿಯನ್ನು ಹೈಕಮಾಂಡ್​ಗೆ ಕಳಿಸಿಕೊಡಲಾಗುತ್ತದೆ. ಫೈನಲ್​ ಆದ ಬಳಿಕ ಘೋಷಣೆ ಮಾಡಲಾಗುತ್ತದೆ ಎಂದು ಬಿಎಸ್​ವೈ ತಿಳಿಸಿದರು. (ದಿಗ್ವಿಜಯ ನ್ಯೂಸ್​)