ಮುಂಬೈ: ಗುರುವಾರವಷ್ಟೇ ಕಾಂಗ್ರೆಸ್ ತೊರೆದಿದ್ದ ಮಾಜಿ ಸಚಿವ ಬಾಬಾ ಸಿದ್ದಿಕ್ ಅಜಿತ್ ಪವಾರ್ ಬಣದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP) ಸೇರ್ಪಡೆಯಾಗಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾದ ಬಾಬಾ ಸಿದ್ದಿಕ್ ಎನ್ಸಿಪಿಯಲ್ಲಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದು ತಿಳಿಸಿದ್ದಾರೆ.
1999, 2004 ಮತ್ತು 2009 ರಲ್ಲಿ ವಂಡ್ರೆ ಪಶ್ಚಿಮ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕ್ (65), ಹಿಂದಿನ ಕಾಂಗ್ರೆಸ್-ಎನ್‌ಸಿಪಿ ನೇತೃತ್ವದ ಡೆಮಾಕ್ರಟಿಕ್ ಫ್ರಂಟ್ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಇವರ ಪುತ್ರ ಜೀಶಾನ್ ಮುಂಬೈನ ಬಾಂದ್ರಾ (ಪೂರ್ವ) ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ.