S.T: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರ ವಿರುದ್ಧ ಬಿಜೆಪಿ ಶಿಸ್ತು ಸಮಿತಿ ಮಂಗಳವಾರ ಉಚ್ಚಾಟನೆ ಮಾಡಲಾಗಿದೆ.
ಈ ಕುರಿತು ಭಾರತೀಯ ಜನತಾ ಪಕ್ಷ ಶಿಸ್ತು ಸಮಿತಿ ಕ್ರಮ ಕೈಗೊಂಡಿದ್ದೀರ ಬಗ್ಗೆ ಆದೇಶ ಹೊರಡಿಸಿದೆ. ಎಸ್,ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿದ್ದಕ್ಕೆ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಆದೇಶ ಉಲ್ಲೇಖಿಸಿದೆ.
ಕಳೆದ 2 ತಿಂಗಳ ಹಿಂದೆ ಅಷ್ಟೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷಕ್ಕೆ ಮುಜುಗರ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಅವರು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದರ ನಡುವೆ ಇದೀಗ ಮತ್ತೆ ಇಬ್ಬರನ್ನು ಉಚ್ಚಾಟನೆ ಮಾಡಲಾಗಿದೆ.