ನ್ಯೂಸ್

ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ!

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಕೇಸ್​ನಲ್ಲಿ ನಟ ದರ್ಶನ್​ ಜತೆ ಕಳೆದ 2 ತಿಂಗಳಿಂದ ಪರಪ್ಪನ ಅಗ್ರಹಾರ ಸೇರಿರುವ ನಟಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಇದೀಗ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನು ಆ.27ಕ್ಕೆ ಮುಂದೂಡಿಕೆ ಮಾಡಿದ್ದು, ನ್ಯಾಯಧೀಶ ಜೈಶಂಕರ್ ಆದೇಶ ಹೊರಡಿಸಿದ್ದಾರೆ.