ನ್ಯೂಸ್

ಕೆಪಿಎಸ್ಸಿ ಅಧ್ಯಕ್ಷರ ವಿರುದ್ಧದ ಸುದ್ದಿ ಪ್ರಸಾರಕ್ಕೆ ತಡೆ

ಬೆಂಗಳೂರು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ವಿರುದ್ಧ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ 17ನೇ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ನಿರ್ಬಂಧಕಾಜ್ಞೆ ಆದೇಶ ಹೊರಡಿಸಿದೆ.

ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರ ವಿರುದ್ಧ ಸಾಮಾಜಿಕ ತಾಣಗಳಲ್ಲಿಮಾನಹಾನಿಕರ ರೀತಿಯಲ್ಲಿ ಪ್ರಸಾರ ಮಾಡುತ್ತಿದ್ದ ಕಾಂತಕುಮಾರ್ ಅಲಿಯಾಸ್ ಶ್ರೀಕಾಂತ್ ಮತ್ತು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳು ಅಧ್ಯಕ್ಷರಿಗೆ ಸಂಬಂಧಂತೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಟಿವಿ, ದಿನಪತ್ರಿಕೆ, ಅಂತರ್ಜಾಲ, ವೆಬ್‌ಸೈಟ್, ಯೂಟ್ಯೂಬ್ ಅಥವಾ ಇನ್ನಿತರ ಸಾಮಾಜಿಕ ತಾಣಗಳಲ್ಲಿ ಮಾಣಹಾನಿಕರ ರೀತಿಯಲ್ಲಿ ಪ್ರಸಾರ ಮಾಡದಂತೆ ಸೂಚನೆ ನೀಡಿದೆ.

ಅಧ್ಯಕ್ಷರ ವಿರುದ್ಧ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಆರೋಪಗಳನ್ನು ಪ್ರಸಾರ ಮಾಡುತ್ತಿದ್ದು, ಇದರಿಂದ ಅಧ್ಯಕ್ಷರ ಘನತೆ, ಗೌರವಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ತಿಳಿಸಿದೆ.