ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ನನ್ನ ಹೆಂಡ್ತಿಗೆ ಸೊಳ್ಳೆಗಳು ಕಚ್ಚುತ್ತಿವೆ ಕಾಪಾಡಿ.. ಕೆಲವೇ ಕ್ಷಣದಲ್ಲಿ ಸೊಳ್ಳೆ ಬತ್ತಿ ಕೊಟ್ಟ ಪೊಲೀಸ್!
ಎಸ್ಎಸ್ಎಲ್ಸಿ ಪರೀಕ್ಷೆ ನಿಮಿತ್ತವಾಗಿ 2023 ಮಾರ್ಚ್ 31 ರಿಂದ 2023 ಏಪ್ರಿಲ್ 4ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ನೀಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಸುಸೂತ್ರವಾಗಿ ಬರೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಒಳಗಿನ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳು ಕಂಪ್ಯೂಟರ್ ಸೆಂಟರ್ ಮುಚ್ಚುವಂತೆ ಸಹ ಆದೇಶವನ್ನೂ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಅನಧಿಕೃತ ವ್ಯಕ್ತಿ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.