ತಿ.ನರಸೀಪುರ: ಭೂ ಸುಧಾರಣಾ, ಎಪಿಎಂಸಿ ಹಾಗೂ ವಿದ್ಯುತ್ ಸಂಬಂಧಿತ ಕಾಯ್ದೆಗಳಿಗೆ ತಿದ್ದುಪಡಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಜೂ.29ರಂದು ಮೈಸೂರಿನ ಉಪ ವಿಭಾಗಾಧಿಕಾರಿಗಳ ಕಚೇರಿ ಮುಂದೆ ಬಾರ್‌ಕೋಲ್ ಚಳವಳಿ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್ ಹೇಳಿದರು.
ಅಂದು ಬೆಳಗ್ಗೆ 9 ಗಂಟೆಗೆ ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಸ್ಥಾನದ ಮುಂಭಾಗದಿಂದ ಬೈಕ್‌ಗಳ ಮೂಲಕ ಮೈಸೂರಿಗೆ ಜಾಥಾ ಹೊರಡಲಾಗುವುದು. ರೈತರು ತಮ ್ಮಬೈಕ್‌ಗಳೊಂದಿಗೆ ಹಾಜರಿರುವಂತೆ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಘದ ರಾಜ್ಯ ಸಂಚಾಲಕ ಅತ್ತಹಳ್ಳಿ ದೇವರಾಜ್, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಟೌನ್ ಅಧ್ಯಕ್ಷ ಅಪ್ಪಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ಕಿರಗಸೂರು ಪ್ರಸಾದ್ ನಾಯಕ್ ಸುದ್ದಿಗೋಷ್ಠಿಯಲ್ಲಿದ್ದರು.