ನ್ಯೂಸ್

ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ FIR

Fir | ಪ್ರವಾದಿ ಮುಹಮ್ಮದ್​ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ.

ಜೊತೆಗೆ "ಬಾಳ ಸಾಹೇಬ್ ಠಾಕ್ರೆ ಮನೆಯಲ್ಲಿ ಮುಹಮ್ಮದ್​ ಪೈಗಂಬರ್ ಹುಟ್ಟಿದ್ದಾನೆ" ಎಂಬ ಧಾರ್ಮಿಕ ಅಪಮಾನಕಾರಕ ಹೇಳಿಕೆ ನೀಡಿದ್ದು, ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಏಪ್ರಿಲ್ 7 ರಂದು ಹುಬ್ಬಳ್ಳಿಯ ಬಾನಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಇಸ್ಲಾಂ ಧರ್ಮ ಮತ್ತು ಪ್ರವಾದಿ ಮುಹಮ್ಮದ್​ ಅವರ ಬಗ್ಗೆ ಶಾಸಕ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮುಹಮ್ಮದ್​ ಹನ್ನಾನ್ ಶೇಖ್ ಎಂಬುವರು ದೂರು ನೀಡಿದ್ದಾರೆ.

ಯತ್ನಾಳ್​ ಅವರ ಈ ಕೃತ್ಯಕ್ಕೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್‌ಗಳಾದ 196 (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶದಿಂದ ಹೇಳಿಕೆ), 299 (ಉದ್ದೇಶಪೂರ್ವಕವಾಗಿ ಅವಮಾನಿಸುವುದು, ಶಾಂತಿ ಭಂಗಪಡಿಸುವ ಉದ್ದೇಶ) ಮತ್ತು 353 (ಕೋಮು ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.