ನ್ಯೂಸ್

ಹಿಂದೂ ಸಂಘಟನೆ ಕಾರ್ಯಕರ್ತರು ಎದೆಗುಂದಬೇಡಿ ನಿಮ್ಮ ಜತೆ ನಾವಿದ್ದೇವೆ: ಬಸನಗೌಡ ಪಾಟೀಲ್​ ಯತ್ನಾಳ್​

ಬೆಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬೆಂಬಲಿಸಿ ಟ್ವೀಟ್ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​, ರಾಜ್ಯ ಸರ್ಕಾರದ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.

ಟ್ವೀಟ್​ ಮಾಡಿರುವ ಬಸನಗೌಡ ಪಾಟೀಲ್​ ಯತ್ನಾಳ್, "ಮಂಗಳೂರಿನ ಬಜರಂಗದಳದ ಕಾರ್ಯಕರ್ತರನ್ನು ಗಡಿಪಾರು ಮಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಕುಗ್ಗಿಸುವ ವ್ಯರ್ಥಪ್ರಯತ್ನ ಮಾಡುತ್ತಿದೆ. ಬಜರಂಗದಳ ಹುಟ್ಟಿದ್ದೇ ಸಂಘರ್ಷಕ್ಕಾಗಿ, ಬಜರಂಗದಳದ ಉದ್ದೇಶ ಸೇವಾ, ಸುರಕ್ಷಾ ಹಾಗು ಸಂಸ್ಕಾರ" ಎಂದು ಟ್ವೀಟ್​​ ಮಾಡಿದ್ದಾರೆ.

"ಹಿಂದೂ ಸಂಘಟನೆ ಕಾರ್ಯಕರ್ತರು ಎದೆಗುಂದಬೇಡಿ, ನಿಮ್ಮ ಜೊತೆ ನಾವಿದ್ದೇವೆ" ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್​ ಮಾಡಿದ್ದಾರೆ.