ನ್ಯೂಸ್

ಬಸವ ಜಯಂತಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಾಳೆ

ಶಿವಶಂಕರ್ ಎಂ. ಹೆಬ್ಬಳ್ಳ

ಆಲೂರು: ಆಲೂರು ತಾಲೂಕು ವೀರಶೈವ ಲಿಂಗಾಯತ ಸಂಘ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಆಲೂರು ಘಟಕ ಮತ್ತು ಸಮಾಜದ ವತಿಯಿಂದ ಬಸವ ಜಯಂತಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜೂ.11 ರಂದು ವೀರಶೈವ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.

ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಪಟ್ಟಣದ ಕೆಇಬಿ ವೃತ್ತದಲ್ಲಿರುವ ಶ್ರೀ ಸಂಗಮೇಶ್ವರ ದೇವಸ್ಥಾನದಿಂದ ವೀರಶೈವ ಸಮುದಾಯ ಭವನದವರೆಗೆ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ನಂತರ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ಸಮಾಜದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಸಂಕ್ಲಾಪುರ ಮಠದ ಪೀಠಾಧ್ಯಕ್ಷ ಶ್ರೀ ಧರ್ಮರಾಜೇಂದ್ರ ಸ್ವಾಮೀಜಿ, ರಂಭಾಪುರಿ ವೀರಾ ಸಿಂಹಾಸನ ಶಾಖಾ ಸಂಸ್ಥಾನ ಹಿರೇಮಠದ ಪೀಠಾಧ್ಯಕ್ಷ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಮಾಜದ ಹಿರಿಯ ಮುಖಂಡರು ಆಲೂರು ತಾಲೂಕು ವೀರಶೈವ ಲಿಂಗಾಯತ ಸಂಘದ ನಿರ್ದೇಶಕರು, ಸದಸ್ಯರು, ಆಲೂರು ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ ನಿರ್ದೇಶಕರು ಸದಸ್ಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕು ಎಂದು ಆಲೂರು ತಾಲೂಕು ವೀರಶೈವ ಲಿಂಗಾಯತ ಸಂಘ ಹಾಗೂ ಆಲೂರು ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದೆ.