ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ, ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ್ ಬೊಮ್ಮಾಯಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ನಗರದ ಸಿಟಿ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವ ಸಂಸದ ಬಸವರಾಜ್ ಬೊಮ್ಮಾಯಿ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 28ಕ್ಕೆ ನಡೆಸಲಿದೆ. ಇದಲ್ಲದೇ ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಹೇರುವಂತೆ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಿದ್ದಾರೆ.
ಆಗಸ್ಟ್ 28ರಂದು ಅರ್ಜಿ ವಿಚಾರಣೆ ನಡೆಸಲಿರುವ ನ್ಯಾಯಾಲಯವು ಅಂದೇ ತೀರ್ಪನ್ನು ಪ್ರಕಟಿಸುವ ನಿರೀಕ್ಷೆ ಇದೆ. ಆದರೆ, ಸಂಸದ ಬಸವರಾಜ್ ಬೊಮ್ಮಾಯಿ ಅವರು ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ತಂದಿರುವುದು ಅಚ್ಚರಿ ಮೂಡಿಸಿದೆ.