ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಲೇವಡಿ ಮಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಾರಿಗೆ ಬಸ್ಗಳು ಕೆಟ್ಟು ನಿಲ್ಲುವುದು, ಸಾರಿಗೆ ನೌಕರರು ಪರದಾಡುವಂತ ಪರಿಸ್ಥಿತಿಗಳು ದೂರವಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: 6 ಲಕ್ಷ ರೂ.ವೇತನದ ಉದ್ಯೋಗ, ಸಿನಿಮಾದಲ್ಲಿ ಆಫರ್… ಭಾರತದಲ್ಲಿ ಮಿಂಚುತ್ತಿರುವ ಪಾಕ್ ಮಹಿಳೆ ಸೀಮಾ ಹೈದರ್
ಈ ಬಗ್ಗೆ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, "ಶಕ್ತಿ ಯೋಜನೆ ಫಲಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ. ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.
"ಮುಂಬರುವ ದಿನಗಳಲ್ಲಿ ಸಾರಿಗೆ ನಿಗಮಗಳು ಬಸ್ಗಳನ್ನು ಡೀಸೆಲ್ ಇಲ್ಲದೆ ನಿಲ್ಲಿಸುವಂತದ್ದು, ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತದ್ದು, ಕೆಟ್ಟ ಬಸ್ಗಳು ರಸ್ತೆಯಲ್ಲಿ ನಿಲ್ಲುವ ದಿನಗಳು ದೂರವಿಲ್ಲ" ಎಂದು ಟ್ವೀಟ್ ಮುಖೇನ ರಾಜ್ಯ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.