ನ್ಯೂಸ್

ಪ್ರತಿದಿನ ಬಿಸಿನೀರಿನಲ್ಲಿ ಸ್ನಾನ ಮಾಡುತ್ತೀರಾ? ಹಾಗಿದ್ರೆ ಈ ಮಾಹಿತಿ ತಿಳಿದಿರಲಿ..

ಬೆಂಗಳೂರು: ಸಾಮಾನ್ಯವಾಗಿ ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದ ಕೆಲವು ಪ್ರಯೋಜನಗಳಿದ್ದರೂ ಕೆಲವು ಆರೋಗ್ಯ ಸಮಸ್ಯೆಗಳಿವೆ. ಪ್ರತಿದಿನ ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ಬರಬಹುದು. ಬಿಸಿ ನೀರಿನಿಂದ ಸ್ನಾನ ಮಾಡುವುದು ಒಳ್ಳೆಯದಲ್ಲ ಎನ್ನುತ್ತಾರೆ ಆರೋಗ್ಯ ತಜ್ಞರು.

೧) ಬಿಸಿ ನೀರಿನಿಂದ ದಿನನಿತ್ಯ ಸ್ನಾನ ಮಾಡುವುದರಿಂದ ತ್ವಚೆಯ ಜೀವಕೋಶಗಳಿಗೆ ಹಾನಿಯಾಗುತ್ತದೆ. ಇದಲ್ಲದೆ, ಚರ್ಮವು ಬೇಗನೆ ಒಣಗುತ್ತದೆ. ಮೃದುವಾಗಿರುವುದಿಲ್ಲ.

೨) ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದ ದೇಹದಲ್ಲಿ ರಕ್ತಸಂಚಾರ ಹೆಚ್ಚುತ್ತದೆ. ಇದು ಮೆದುಳಿನ ಮೇಲೆ ಒತ್ತಡವನ್ನೂ ಉಂಟುಮಾಡುತ್ತದೆ.

೩) ಹೃದಯದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬಿಸಿನೀರಿನೊಂದಿಗೆ ಸ್ನಾನ ಮಾಡುವುದು ತುಂಬಾ ಅಪಾಯಕಾರಿ.

೪) ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ಹೃದಯರಕ್ತನಾಳದ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ.

೫) ಬಿಸಿ ನೀರಿನಿಂದ ತಲೆ ಸ್ನಾನ ಮಾಡುವುದರಿಂದ ಕೂದಲು ಉದುರಬಹುದು.