ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಕಚೇರಿಯ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಭೀಕರ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದವರ ಪೈಕಿ ಒಬ್ಬರು ಇಂದು ಸಾವಿಗೀಡಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಇವರನ್ನು ಉಳಿಸಿಕೊಳ್ಳಲು ಆಗಲಿಲ್ಲ.
ತೀವ್ರವಾಗಿ ಗಾಯಗೊಂಡಿದ್ದವರ ಪೈಕಿ ಶಿವಕುಮಾರ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದ ಇವರು ಕೆಲವು ದಿನಗಳಿಂದ ಜೀವನ್ಮರಣ ಹೋರಾಟದಲ್ಲಿದ್ದರು.
ಇದನ್ನೂ ಓದಿ: ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್ಫರ್’ ಅಸಾಧ್ಯ ಅನಿಸುತ್ತೆ!
ಶಿವಕುಮಾರ್ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಆಗಲಿದೆ. ನಾಳೆ ಮರಣೋತ್ತರ ಪರೀಕ್ಷೆ ಬಳಿಕ ಶಿವಕುಮಾರ್ ಮೃತದೇಹ ವಾರಸುದಾರರಿಗೆ ಹಸ್ತಾಂತರ ಮಾಡಲಾಗುವುದು ಎನ್ನಲಾಗಿದೆ.
ಬಿಬಿಎಂಪಿ ಮುಖ್ಯ ಕಚೇರಿ ಆವರಣದಲ್ಲಿ ಇರುವ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಆ. 11ರಂದು ಈ ಬೆಂಕಿ ಅವಘಡ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಬಿಬಿಎಂಪಿಯ ಏಳು ನೌಕರರು ಗಾಯಗೊಂಡಿದ್ದರು.