ಬೆಂಗಳೂರು:
ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ಸ್ವಾತಂತ್ರ ಉದ್ಯಾನವನದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ನೀಡದೆ ನಿರ್ಲಕ್ಷ್ಯ ವಹಿಸಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರದಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಹೆಚ್ಚಿನ ಅನುದಾನ ನೀಡಲಾಗಿತ್ತು. ಆದರೆ ಈಗಿನ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಹಿಂದುಳಿದವರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದರೂ ಅನುದಾನ ನೀಡುತ್ತಿಲ್ಲ. ಈಗಲಾದರೂಈ ಬಗ್ಗೆ ಗಮನ ನೀಡಿ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.
ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸೋಮಶೇಖರ್, ರಾಜ್ಯ ಉಪಾಧ್ಯಕ್ಷ ಬಿ. ಗೋವಿಂದರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ಮಹಾನಗರದ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.