ನ್ಯೂಸ್

ಬೆಳಗಾವಿಯಲ್ಲಿ ಗುತ್ತಿಗೆದಾರರ ಪ್ರತಿಭಟನೆ ಡಿ.14ಕ್ಕೆ

Bengaluru - Political - Shivananda Tagadur

ಬೆಂಗಳೂರು:
ಗುತ್ತಿಗೆದಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇತೃತ್ವದಲ್ಲಿ ಡಿ.14ರಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಗುತ್ತಿಗೆದಾರರ ಸಮಸ್ಯೆ ಬಗ್ಗೆ ಚರ್ಚೆ ಆಗಬೇಕು. ಬಾಕಿ ಬಿಲ್ ಕೂಡಲೆ ಬಿಡುಗಡೆ ಮಾಡಬೇಕು ಹಾಗೂ ಹಿರಿತನದ ಆಧಾರದ ಮೇಲೆ ಬಿಲ್ ಪಾವತಿ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರಕ್ಕೆ ನಿರ್ಧರಿಸಲಾಗಿದೆ.
ಇದೇ ಸಂದರ್ಭದಲ್ಲಿ ರಾಜ್ಯ ಗುತ್ತಿಗೆದಾರರ ಜೊತೆಗೆ, ಬೆಳಗಾವಿ ಜಿಲ್ಲೆಯ ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ದೃಷ್ಟಿಯಿಂದ ಒಂದು ದಿನದ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.