ಬೆಂಗಳೂರು: ನಾವು ದಿನನಿತ್ಯ ಅಡುಗೆಯಲ್ಲಿ ಬಳಸುವ ಸೂರ್ಯಕಾಂತಿ ಎಣ್ಣೆ, ತಾಳೆ ಎಣ್ಣೆ, ಕಡಲೆಕಾಯಿ ಎಣ್ಣೆಗಿಂತ ಕೊಬ್ಬರಿ ಎಣ್ಣೆಯಿಂದ ಮಾಡಿದ ಅಡುಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕೇರಳದಲ್ಲಿ ತೆಂಗಿನ ಎಣ್ಣೆಯನ್ನು ಹೆಚ್ಚಾಗಿ ಅಡುಗೆಯಲ್ಲಿ ಬಳಸುತ್ತಾರೆ. ತೆಂಗಿನೆಣ್ಣೆಯಿಂದ ಅಡುಗೆ ಮಾಡುವುದರಿಂದ ನೀವು ಮಾಡುವ ಅಡುಗೆ ರುಚಿ ಹೆಚ್ಚಾಗುವುದರ ಜತೆಗೆ ಆರೋಗ್ಯಕ್ಕೂ ಒಳ್ಳೆಯದಾಗಿದೆ.
1) ತೆಂಗಿನೆಣ್ಣೆ 90 ರಷ್ಟು ಕೊಬ್ಬಿನಾಮ್ಲಗಳನ್ನು ಹೊಂದಿರುತ್ತದೆ. ತೆಂಗಿನ ಎಣ್ಣೆಯಲ್ಲಿರುವ ಲಾರಿಕ್ ಆಮ್ಲವು ದೇಹದಲ್ಲಿ ಸಂಗ್ರಹವಾದ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸುತ್ತದೆ ಮತ್ತು ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ತೂಕ ಹೆಚ್ಚಳದಿಂದ ಉಂಟಾಗುವ ಆರೋಗ್ಯ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಡುತ್ತದೆ.
2) ಕೊಬ್ಬರಿ ಎಣ್ಣೆಯನ್ನು ಅಡುಗೆಯಲ್ಲಿ ಬಳಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.
3) ತೆಂಗಿನ ಎಣ್ಣೆಯಲ್ಲಿ ಕಂಡುಬರುವ ಆರೋಗ್ಯಕರ ಕೊಬ್ಬುಗಳು ಜೀರ್ಣಾಂಗ ವ್ಯವಸ್ಥೆಯಲ್ಲಿ ಕೆಟ್ಟ ಬ್ಯಾಕ್ಟೀರಿಯಾವನ್ನು ನಾಶಮಾಡುತ್ತವೆ. ಇದು ಹೊಟ್ಟೆಯಲ್ಲಿನ ಉರಿಯೂತವನ್ನು ಸಹ ಕಡಿಮೆ ಮಾಡುತ್ತದೆ.
4) ಒಂದು ಅಥವಾ ಎರಡು ಚಮಚ ತೆಂಗಿನ ಎಣ್ಣೆಯನ್ನು ಬಳಸಿ ಮತ್ತು ಆಹಾರವನ್ನು ತಯಾರಿಸಿ. ಆಗ ನಾಲಿಗೆಗೆ ನೀವು ಮಾಡುವ ಅಡುಗೆಯೂ ರುಚಿಯಾಗಿರುವುದರ ಜತೆಗೆ ಆರೋಗ್ಯಕ್ಕೂ ಒಳ್ಳೆಯದಾಗಿದೆ.
5) ತೆಂಗಿನೆಣ್ಣೆಯಿಂದ ತಯಾರಿಸಿದ ಆಹಾರಗಳು ಬಹು ಬೇಗ ಹಸಿವಾಗುವುದನ್ನು ತಡೆಯುತ್ತದೆ. ಜತೆಗೆ ಚಯಾಪಚಯ ಕ್ರಿಯೆಯನ್ನು ಸುಧಾರಿಸುವುದು.