ನ್ಯೂಸ್

ಬೆಂಗಳೂರು ಅಗ್ನಿ ಅವಘಡ: 5ಕ್ಕೇರಿದ ಸಾವಿನ ಸಂಖ್ಯೆ | Fire Tragedy

Fire Tragedy: ಬೆಂಗಳೂರಿನ ಹಲಸೂರು ಗೇಟ್​ ಪೊಲೀಸ್​ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿರುವ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇದೀಗ ಸಾವಿನ ಸಂಖ್ಯೆ 5ಕ್ಕೆ ಏರಿಕೆ ಆಗಿದೆ.

ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ.

ಇಂದು ಮುಂಜಾನೆ 3.30ರ ಸುಮಾರಿಗೆ ಶಾರ್ಟ್​ ಸರ್ಕ್ಯೂಟ್​ ನಿಂದ ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್​ ಆಯುಕ್ತ ಸೀಮಂತ್​ ಕುಮಾರ್​ ಸಿಂಗ್​ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ರೌಂಡ್ ಫ್ಲೋರ್ ನಲ್ಲಿರುವ ಗೊದಾಮುನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್​ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದರೆ, ದುರಾದೃಷ್ಟವಂತ ಕುಟುಂಬ ಬೆಂಕಿಗೆ ಆಹುತಿಯಾಗಿದೆ.