ಬೆಂಗಳೂರು: ಪೊಲೀಸ್ ಸಿಬ್ಬಂದಿಗೆ ಉತ್ತೇಜನ ನೀಡಲು ಬಾಡಿ ವೋರ್ನ್ ಕ್ಯಾಮೆರಾ ಧರಿಸಿದ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕೂಡ ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಆದೇಶ ನೀಡಿದ್ದಾರೆ.
ಹೊಯ್ಸಳ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಬಾಡಿ ವೋರ್ನ್ ಕ್ಯಾಮೆರಾ ಧರಿಸಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಿದ್ದಾರೆ. ಗಲಭೆ, ಪ್ರತಿಭಟನೆ ಹಾಗೂ ಬೃಹತ್ ಕಾರ್ಯಕ್ರಮಗಳಲ್ಲಿ ಇನ್ಸ್ಪೆಕ್ಟರ್ಗಳು ಈ ಕ್ಯಾಮೆರಾ ಧರಿಸುವಂತೆ ಹೇಳಿದ್ದಾರೆ.
ಈ ಆದೇಶ ಹೊರಡಿಸಲು ಮುಖ್ಯ ಉದ್ದೇಶ, ಕೆಳಹಂತದ ಸಿಬ್ಬಂದಿಗೆ ಉತ್ತೇಜನ ನೀಡಲು ಯೋಜಿಸಿರುವ ಹೊಸ ಪ್ರಯತ್ನ ಎಂದು ಹೇಳಲಾಗಿದೆ. ಕಮಿಷನರ್ ಬಿ. ದಯಾನಂದ್ ಅವರು ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ತಾವೇ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.