Rain Alert: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಜನವರಿ 14 ರಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಮೂನ್ಸೂಚನೆ ಇರುವ ಪ್ರದೇಶ: ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಜನವರಿ 14ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಣಹವೆ : ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಚಳಿ, ಒಣಹವೆ ಮುಂದುವರೆಯಲಿದೆ.