ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಭಾಗ ಸೇರಿದಂತೆ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅದರಂತೆ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ.ಎಂದು ಹವಾಮಾನ ಇಲಾಖೆ ತಿಳಿಸಿದೆ.