ನ್ಯೂಸ್

ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು, ಹವಾಮಾನ ಇಲಾಖೆಯಿಂದ ಆರೆಂಜ್​​ ಅಲರ್ಟ್​​…!

ಕೇರಳ: ನೈರುತ್ಯ ಮುಂಗಾರು ಈ ಬಾರಿ ಅಧಿಕೃತವಾಗಿ ಕೇರಳಕ್ಕೆ ಆಗಮಿಸಿದ್ದು, ಗುರುವಾರ ಈಶಾನ್ಯ ಭಾರತದ ಬಹುತೇಕ ಭಾಗಗಳಿಗೆ ಕಾಲಿಟ್ಟಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷದ ಮುಂಗಾರು ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಗೂ 2 ದಿನಗಳ ಮುನ್ನವೇ ಬಂದಿದೆ.

ಕೇರಳವು ಸಾಮಾನ್ಯ ಮಾನ್ಸೂನ್ ಮಳೆಯನ್ನು ಸುಮಾರು 6 ಪ್ರತಿಶತದಷ್ಟು ಹೆಚ್ಚು ಪಡೆಯುವ ನಿರೀಕ್ಷೆಯಿದೆ.

ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ರಾಜ್ಯದೆಲ್ಲೆಡೆ ಹಾನಿಯಾಗಿದೆ. ಮುನ್ಸೂಚನೆಗಳ ಪ್ರಕಾರ ಜೂನ್ 2 ರವರೆಗೆ ಕೇರಳದ ಹೆಚ್ಚಿನ ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ ಮತ್ತು ಕೋಯಿಕ್ಕೋಡ್ ಹನ್ನೊಂದು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​​ ನೀಡಿದೆ. ಈ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ.

ಜೂನ್​ 2ರ ವರೆಗೂ ಕೇರಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಗಾಳಿಯ ವೇಗವು ದಕ್ಷಿಣ ಕೇರಳ ಕರಾವಳಿಯಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.