ಬಳ್ಳಾರಿ: ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್ಗೆ ಬಳ್ಳಾರಿಯಲ್ಲಿ ಬೆಂಬಲ ವ್ಯಕ್ತಪಡಿಸಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿಐಟಿಯು, ಎಐಡಿಎಸ್ಯು, ಸಿಪಿಐ, ಎಐವೈಎಫ್ನ ನೂರಾರು ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ್ದಲ್ಲದೆ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮೋತಿವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಪಾಲ್ಗೊಂಡು ಕಾರ್ಮಿಕ ಸಂಘಟನೆಗಳಿಗೆ ಸಾಥ್ ನೀಡಿದರು. ಕೇಂದ್ರ ಸರ್ಕಾರದ ಕಾರ್ಯ ವೈಖರಿಯ ಬಗ್ಗೆ ಅಸಮಾಧಾನ ಹೊರಹಾಕಿದರು.