ನ್ಯೂಸ್

ಭವಾನಿ ಜಾಮೀನು ಅರ್ಜಿ ವಿಚಾರಣೆ

ಗೋವಿಂದರಾಜು ಚಿನ್ನಕುರ್ಚಿ

ಬೆಂಗಳೂರು : ಲೈಂಗಿಕ ದೌರ್ಜನ್ಯ ಹಗರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ.

ಭವಾನಿ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆಕ್ಷೇಪಣೆ ಸಲ್ಲಿಸುವಂತೆ ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿದ್ದರು.

ಮಂಗಳವಾರ ಕೋರ್ಟ್ ಮುಂದೆ ವಿಚಾರಣೆ ಬಂದಾಗ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಆಗ ಭವಾನಿ ಪರ ವಕೀಲರು, ಮಧ್ಯಂತರ ಜಾಮೀನು ನೀಡುವಂತೆ ಕೋರಿದಾಗ ನ್ಯಾಯಾಲಯ ಬುಧವಾರಕ್ಕೆ ವಿಚಾರಣೆ ಮುಂದೂಡಿತು.