ನ್ಯೂಸ್

ಸಂತ್ರಸ್ತೆ ಕಿಡ್ನ್ಯಾಪ್​ ಪ್ರಕರಣ; ಭವಾನಿ ರೇವಣ್ಣ ಕಾರು ಚಾಲಕ ಅರೆಸ್ಟ್​

ಚಿಕ್ಕಮಗಳೂರು:  ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್​​ ಕೇಸ್​ ವಿಚಾರವಾಗಿ ಭವಾನಿ ರೇವಣ್ಣ ಕಾರು ಚಾಲಕನನ್ನು ವಿಶೇಷ ತನಿಖಾ ದಳದ (SIT) ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನನ್ನು ಅಜಿತ್​ ಎಂದು ಗುರುತಿಸಲಾಗಿದ್ದು, ಈತನನ್ನು ಎಸ್​ಐಟಿ ಅಧಿಕಾರಿಗಳು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ.

ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್​ಗೆ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ಅಧಿಕಾರಿಗಳು ನೋಟಿಸ್​ ನೀಡಿದರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಅಧಿಕಾರಿಗಳು ಹೊಳೆನರಸೀಪುರದಲ್ಲಿರುವ ಅಜಿತ್​ ನಿವಾಸಕ್ಕೆ ತೆರಳಿ ಸಮನ್ಸ್​ ಜಾರಿ ಮಾಡಿದ್ದರು.

ಮೈಸೂರು ಜಿಲ್ಲೆ ಕೆಆರ್​ನಗರ ಮೂಲದ ಸಂತ್ರಸ್ತೆಯನ್ನು ಅಜಿತ್​ ಕರೆದುಕೊಂಡು ಹೋಗಿದ್ದ ಎಂಬ ಮಾಹಿತಿ ಲಭ್ಯವಾಗಿತ್ತು. ಜೊತೆಗೆ ರೇವಣ್ಣ ನಿರೀಕ್ಷಣಾ ಜಾಮೀನು ವಿಚಾರಣೆ ದಿನ ಸಂತ್ರಸ್ತ ಮಹಿಳೆಯ ವಿಡಿಯೋ ಚಿತ್ರೀಕರಿಸಿದ್ದ ಎಂದು ತಿಳಿದು ಬಂದಿದೆ. ಹೀಗಾಗಿಯೇ ಅಜಿತ್​ಗಾಗಿ ಎಸ್​ಐಟಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದರು ಎಂದು ವರದಿಯಾಗಿದೆ.