ಬಿಹಾರ: ಬಿಹಾರದ ಜಾನಪದ ಗಾಯಕಿ ನಿಶಾ ಉಪಾಧ್ಯಾಯ ಅವರು ಸರನ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡುತ್ತಿದ್ದಾಗ ವೇದಿಕೆ ಮೇಲೆ ಗುಂಡೇಟು ತಗುಲಿ ಗಾಯಗೊಂಡಿದ್ದಾರೆ. ಗಾಯಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸರನ್‌ನಲ್ಲಿ, ಭೋಜ್‌ಪುರಿ ಗಾಯಕಿ ನಿಶಾ ಉಪಾಧ್ಯಾಯ ಅವರು ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಸಂಭ್ರಮಾಚರಣೆಯ ಗುಂಡಿನ ದಾಳಿಯಲ್ಲಿ ಬುಲೆಟ್ ಗಾಯಗೊಂಡಿದ್ದಾರೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಪಾಟ್ನಾದಲ್ಲಿ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಗಾಯಕಿ ನಿಶಾ ಉಪಾಧ್ಯಾಯ ಸಂಗೀತ ಕಾರ್ಯಕ್ರಮ ನೀಡುತ್ತಿರುವ ವೇಳೆ ಅಗಂತುಕನೊಬ್ಬ ಗುಂಡು ಹಾರಿಸಿದ್ದು, ಎಡಗಾಲಿಗೆ ಗುಂಡು ತಗುಲಿದೆ.
ಯಾವುದೇ ಗಂಭೀರ ಗಾಯಗಳಾಗಿಲ್ಲ. ಬದಲಿಗೆ ಗಾಯಕಿಯ ಎಡಗಾಲಿನ ತೊಡೆಯ ಭಾಗಕ್ಕೆ ಸಣ್ಣ ಗಾಯವಷ್ಟೆ ಆಗಿದೆ. ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಗಾಯಕಿ ನಿಶಾ ಉಪಾಧ್ಯಾಯ, ಬಿಹಾರದ ಸರಾನಾ ಜಿಲ್ಲೆಯ ಗೌರ್ ಬಸಂತ್ ಗ್ರಾಮದವರಾಗಿದ್ದಾರೆ. ಬಿಹಾರದ ಜನಪ್ರಿಯ ಭೋಜ್‌ಪುರಿ ಗಾಯಕರಲ್ಲಿ ನಿಶಾ ಸಹ ಒಬ್ಬರಾಗಿದ್ದು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಮದುವೆ, ಹೋಳಿ ಇನ್ನಿತರೆಗಳಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.