ರಾಮ್ ಚರಣ್ ಅವರು ಚೆಕ್ ಹಾಗೂ ಅವಾರ್ಡ್ನ ನಿಖಿಲ್ಗೆ ನೀಡಿದ್ದಾರೆ. ಬೇರೆ ಭಾಷೆಗೆ ತೆರಳಿ ಕನ್ನಡದ ಹುಡುಗ ಗೆದ್ದಿರುವುದರಿಂದ ದಾಖಲೆ ಸೃಷ್ಟಿ ಆಗಿದೆ.
ನಿಖಿಲ್ ಅವರು ಮೂಲತಃ ಕರ್ನಾಟಕದವರು. ಅವರು ಹುಟ್ಟಿದ್ದು ಮೈಸೂರಿನಲ್ಲಿ. ಅವರಿಗೆ ತೆಲುಗು ಚಿತ್ರರಂಗದ ಜೊತೆ, ಅಲ್ಲಿನ ಕಿರುತೆರೆ ಜೊತೆ ಒಳ್ಳೆಯ ನಂಟು ಬೆಳೆದಿದೆ. ಅವರು ನಟ ಹಾಗೂ ಯೂಟ್ಯೂಬರ್. ನಿಖಿಲ್ಗೆ ಇನ್ನೂ 27 ವರ್ಷ. ಅವರು 2016ರಲ್ಲಿ ‘ಊಟಿ’ ಹೆಸರಿನ ಕನ್ನಡ ಸಿನಿಮಾ ಮಾಡಿದರು. 2019ರಲ್ಲಿ ಪ್ರಸಾರ ಆರಂಭಿಸಿದ ತೆಲುಗಿನ ‘ಗೋರಿಂಟಕು’ ಧಾರಾವಾಹಿ ಮೂಲಕ ಅವರು ತೆಲುಗು ರಂಗದಲ್ಲಿ ಫೇಮಸ್ ಆದರು.
ನಿಖಿಲ್ ಅವರು ಸೆಪ್ಟೆಂಬರ್ 1ರಂದು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದರು. ಬಿಗ್ ಬಾಸ್ನಲ್ಲಿ ಭರ್ಜರಿ ಮನರಂಜನೆ ನೀಡಿ ಗಮನ ಸೆಳೆದರು. ಈಗ ಬಿಗ್ ಬಾಸ್ ವಿನ್ ಆಗಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಅವಾರ್ಡ್ ಹಣ ಸಿಕ್ಕಿದೆ.