‘ಜೊತೆ ಜೊತೆಯಲಿ’ ಸೀರಿಯಲ್ ಮೂಲಕ ಕರ್ನಾಟಕ ಜನತೆಯ ಮನಗೆದ್ದ ಮಂಗಳೂರಿನ ಬೆಡಗಿ ಮೇಘಾ ಶೆಟ್ಟಿ ಅವರು ಬಿಗ್ ಬಾಸ್ ಆಟಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿಗೆ ಕೊನೆಗೂ ಉತ್ತರ ಸಿಕ್ಕಿದೆ.
ಕನ್ನಡದ ಕಿರುತೆರೆ ನಟಿ ಮೇಘಾ ಶೆಟ್ಟಿ ಬಿಗ್ ಬಾಸ್ ಸೀಸನ್ 10ಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಈ ವಿಚಾರವಾಗಿ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚೆಗೆ ಕನ್ನಡದಲ್ಲಿ ನಟ ಡಾರ್ಲಿಂಗ್ ಕೃಷ್ಣ ಅವರ ಜೊತೆ ನಟಿಸಿ ಮೇಘಾ ಶೆಟ್ಟಿ ಸೈ ಎನಿಸಿಕೊಂಡಿದ್ದರು. ಈ ಬಾರೀ ಸಾಕಷ್ಟು ಕುತೂಹಲ ಕೆರಳಿಸಿರುವ ಬಿಗ್ ಬಾಸ್ ಮನೆಗೆ ಮೇಘಾ ಶೆಟ್ಟಿ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದು, ಅದು ಅಧಿಕೃತ ಮಾಹಿತಿ ಆಗಿರಲಿಲ್ಲ. ಆದ್ರೆ ಈ ಪ್ರಶ್ನೆಗೆ ಇದೀಗ ಸ್ವತ: ಮೇಘಾ ಶೆಟ್ಟಿ ಅವರೇ ಉತ್ತರಿಸಿದ್ದಾರೆ.
ಅಕ್ಟೋಬರ್ 4ರಿಂದ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರದಲ್ಲಿ ಮಂಗಳೂರು ಚೆಲುವೆಯೂ ನಟಿಸಲಿದ್ದಾರೆ. ಹೀಗಾಗಿ ಅನು ಅಲಿಯಾಸ್ ಮೇಘಾ ಶೆಟ್ಟಿ ಬಿಗ್ ಬಾಸ್‌ಗೆ ಎಂಟ್ರಿ ಕೊಡುತ್ತಿಲ್ಲ.
ಗ್ರಾಮಾಯಣ’ ಸಿನಿಮಾ ಜೊತೆಗೆ ಬೇರೆ ಬೇರೆ ಸಿನಿಮಾಗಳನ್ನ ಕೂಡ ನಟಿ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಜೊತೆಗೆ ಒಪ್ಪಿಕೊಂಡಿರುವ ಪ್ರಾಜೆಕ್ಟ್‌ಗಳನ್ನ ನಟಿ ಪೂರ್ಣಗೊಳಿಸಬೇಕಿದೆ. ಧನ್ವೀರ್ ಗೌಡ ಜೊತೆಗಿನ ‘ಕೈವ’ ಚಿತ್ರ ಕೂಡ ರಿಲೀಸ್‌ಗೆ ರೆಡಿಯಿದೆ. ಸಾಕಷ್ಟು ಸಿನಿಮಾಗಳ ರಿಲೀಸ್‌ಗೆ ಇರುವ ಕಾರಣದಿಂದಾಗಿ ನಟಿ ಬಿಗ್ ಬಾಸ್‌ಗೆ ಹೋಗುತ್ತಿಲ್ಲ.