ಇತ್ತೀಚೆಗೆ ದೇಶದಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಅಪಾರ ಕನಸು ಹೊತ್ತು, ನ್ಯಾಯಯುತವಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಇದರಿಂದ ಭಾರೀ ಅನ್ಯಾಯ ಉಂಟಾಗುತ್ತಿದೆ. ರಾಜ್ಯದಲ್ಲಿಯೂ ಇಂತಹ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂದು (ಜು.24) ಬಿಹಾರ ಸರ್ಕಾರ ವಿಧಾನಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿದೆ.
ಬಿಹಾರ ಸಾರ್ವಜನಿಕ ಪರೀಕ್ಷೆಗಳ (PE) (ಅನ್ಯಾಯ ವಿಧಾನಗಳ ತಡೆ) ಮಸೂದೆ 2024 ಅನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಮಂಡಿಸಿದ್ದು, ಪ್ರತಿಪಕ್ಷಗಳ ನಾಯಕರು ಹೊರಹೋಗುವ ಮಧ್ಯೆಯೂ ಮಸೂದೆ ಬಗ್ಗೆ ಧ್ವನಿ ಎತ್ತಿರುವುದು ಗಮನಾರ್ಹ. ನೀಟ್ 2024ರ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಕೇಂದ್ರಬಿಂದುವಾಗಿರುವ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ದುಷ್ಕೃತ್ಯಗಳನ್ನು ತಡೆಯುವ ಗುರಿಯನ್ನು ಈ ಹೊಸ ಶಾಸನ ಹೊಂದಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾದ ಅಪರಾಧಿಗಳಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ಗಳ ದಂಡ ಸೇರಿದಂತೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಮಸೂದೆಯಲ್ಲಿ ತಿಳಿಸಲಾಗಿದೆ,(ಏಜೆನ್ಸೀಸ್).