ನ್ಯೂಸ್

ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ; ಮೂವರು ಮಕ್ಕಳೊಂದಿಗೆ ಪ್ರಾಣ ಬಿಟ್ಟ ಮಹಿಳೆ

ಗಯಾ: ಇತ್ತಿಚಿನ ದಿನಗಳಲ್ಲಿ ಕೌಟುಂಬಿಕ ಕಲಹ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಹಿಳೆಯರ ಮೇಲೆ ಒಂದಿಲೊಂದು ವಿಚಾರಕ್ಕೆ ದೌರ್ಜನ್ಯ ಎಸಗಲಾಗುತ್ತಿದೆ.

ಬಿಹಾರದ ಗಯಾ ಜಿಲ್ಲೆಯಲ್ಲಿ ಇದೇ ರಿತಿಯ ಘಟನೆಯೊಂದು ನಡೆದಿದ್ದು ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಪ್ರಾಣ ಬಿಟ್ಟಿದ್ದಾರೆ.

ನೇಣಿಗೆ ಶರಣು

ಪತಿ ನೀಡುತ್ತಿದ್ದ ಕಿರುಕುಳ ತಾಳಲಾರದೆ ಮಾಲತಿ ದೇವಿ ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಸಂಬಂಧ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಘಟನೆಯೂ ಬಿಹಾರದ ಗಯಾ ಜಿಲ್ಲೆಯ ಮಾಗ್ರಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಪತಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಕಿರುಕುಳ ತಾಳಲಾರದೆ ಆತ್ಮಹತ್ಯೆ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹಿಮಾಂಶು ಮೃತ ಮಹಿಳೆ ಮೊದಲು ತನ್ನ ಮೂವರು ಮಕ್ಕಳನ್ನು ನೇಣಿಗೆ ಹಾಕಿ ನಂತರ ಆಕೆ ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾರೆ.

ಪ್ರಾಥಮಿಕ ತನಿಖೆ ವೇಳೆ ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಮೃತ ಮಹಿಳೆಯ ಸಂಬಂಧಿಗಳು ಆಕೆಯ ಪತಿ ಮೇಲೆ ಆರೋಪಿಸಿದ ಕಾರಣ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.