ನ್ಯೂಸ್

ಬೈಕ್​ಗಳ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ

ಬೀದರ್: ಎರಡು ಬೈಕ್​ಗಳ ಮುಖಾಮುಖಿ ಡಿಕ್ಕಿಯಿಂದಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಭೀಕರ ಅಪಘಾತವೊಂದು ನಡೆದಿದೆ. ಬೀದರ್​ನ ಮನ್ನಾಏಖ್ಖೇಳ್ಳಿ ಮುತ್ತಂಗಿ ರಸ್ತೆಯ ನಿರ್ಣಾವಾಡಿ ಬಳಿ ಈ ಅಪಘಾತ ಸಂಭವಿಸಿದೆ.

ಬಸಿಲಾಪೂರ ಗ್ರಾಮದ ಸಂಜು (21) ಹಾಗೂ ನಿರ್ಣಾ ಗ್ರಾಮದ ಸಂತೋಷ (22) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮಲ್ಲಪ್ಪ ಹಾಗೂ ಇನ್ನೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬ್ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸವಾರರು ಪಾನಮತ್ತರಾಗಿ ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ಹೆಲ್ಮೆಟ್​ ಕೂಡ ಧರಿಸಿರಲಿಲ್ಲ. ವೇಗದ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ಈ ಅಪಘಾತ ಸಂಭವಿಸಿದೆ. ಮನ್ನಾಏಖ್ಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.