ನ್ಯೂಸ್

ಅಪಘಾತದಲ್ಲಿ ಬೈಕ್ ಸವಾರ ಸಾವು

ಮಳವಳ್ಳಿ : ತಾಲೂಕಿನ ಮಾರ್ಕಾಲು ಗೇಟ್ ಸಮೀಪದ ಮೈಸೂರು ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸವಾರ ಮೃತಪಟ್ಟು, ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿದ್ದಾನೆ.

ಮೃತ ವೆಂಕಟೇಶ್

ಪಟ್ಟಣದ ಗಂಗಾಮತ ಬಡಾವಣೆ ನಿವಾಸಿ ಸುಬ್ಬಯ್ಯ ಅವರ ಪುತ್ರ ವೆಂಕಟೇಶ್(25)ಮೃತ. ಹಿಂಬದಿ ಸವಾರ ಕಲ್ಕುಣಿ ಗ್ರಾಮದ ಶಿವಕುಮಾರ್ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಇಬ್ಬರು ಸ್ನೇಹಿತರು ಬೈಕ್‌ನಲ್ಲಿ ಮಳವಳ್ಳಿಯಿಂದ ಕಲ್ಕುಣಿ ಗ್ರಾಮಕ್ಕೆ ತೆರಳುತ್ತಿದ್ದು, ಎದುರಿನಿಂದ ಬಂದ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿ ಇಬ್ಬರೂ ಸವಾರರು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಆಂಬುಲೆನ್ಸ್ ಮೂಲಕ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯ ವೆಂಕಟೇಶ್ ಮೃತಪಟ್ಟಿದ್ದಾರೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.