Birth Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ. ಹಿಂದು ಧರ್ಮದಲ್ಲಿ ಈ ಜನ್ಮ ದಿನಾಂಕ ಮತ್ತು ಹುಟ್ಟಿದ ಗಳಿಗೆಯು ವ್ಯಕ್ತಿಯ ಜೀವನದ ಮೇಲೆ ಬಹಳ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ. ಹುಟ್ಟಿದ ದಿನ ಮತ್ತು ಗಳಿಗೆಯ ಆಧಾರದ ಮೇಲೆ ವ್ಯಕ್ತಿಯ ರಾಶಿ ಮತ್ತು ನಕ್ಷತ್ರಗಳನ್ನು ನಿರ್ಧರಿಸಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಆತನ ಭವಿಷ್ಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ.
ಅಂದಹಾಗೆ ಒಬ್ಬ ವ್ಯಕ್ತಿಯ ಗುಣ, ನಡತೆ, ವರ್ತನೆ ಹಾಗೂ ಆತನ ಆಗು ಹೋಗುಗಳ ಹಿಂದೆ ಜನ್ಮ ನಕ್ಷತ್ರಗಳು ಕಾರಣವಾಗಿರುತ್ತದೆ. ಜನ್ಮ ನಕ್ಷತ್ರದ ಪ್ರಕಾರವಾಗಿ ಜೀವನದಲ್ಲಿ ಏನು ನಡೆಯಬೇಕೋ ಅದು ನಡದೇ ನಡೆಯುತ್ತದೆ ಎಂದು ಹಿರಿಯರು ಹೇಳುತ್ತಿರುತ್ತಾರೆ. ನಿಮ್ಮ ಜನ್ಮ ನಕ್ಷತ್ರದ ಪ್ರಕಾರ ನಿಮ್ಮ ವ್ಯಕ್ತಿತ್ವ ಮತ್ತು ಭವಿಷ್ಯವನ್ನು ತಿಳಿದುಕೊಳ್ಳಬಹುದು. ಈ ಜನ್ಮ ನಕ್ಷತ್ರಗಳು ಪ್ರಭಾವ ಒಂದೇ ರೀತಿ ಇರುವುದಿಲ್ಲ. ಗ್ರಹಗಳ ಚಲನೆಯಿಂದಾಗಿ ಅವುಗಳ ಪ್ರಭಾವವೂ ಕೂಡ ಬದಲಾಗುತ್ತಿರುತ್ತದೆ. ಒಂದು ಸಮಯದಲ್ಲಿ ನೋವು ಅನುಭವಿಸಿದ್ದರೆ, ಇನ್ನೊಂದು ಸಮಯದಲ್ಲಿ ಸಂತೋಷದ ಕ್ಷಣಗಳನ್ನು ಅನುಭವಿಸುತ್ತೀರಿ.
ನಾವೀಗ ವರ್ಷದ ಕೊನೆಯ ತಿಂಗಳಿಗೆ ಪ್ರವೇಶ ಮಾಡಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ 2024 ಮುಗಿದು 2025ರ ಹೊಸ ವರ್ಷ ಬರಲಿದೆ. ಹೊಸ ವರ್ಷದಲ್ಲಿ ತಮ್ಮ ಅದೃಷ್ಟ ಬದಲಾಗುತ್ತಾ ಎಂದು ಯೋಚನೆ ಮಾಡುವವರು ಕೂಡ ಇದಾರೆ. ಅದಕ್ಕಾಗಿ ತಮ್ಮ ರಾಶಿಭವಿಷ್ಯ ತಿಳಿದುಕೊಳ್ಳಲು ತೀವ್ರ ಕುತೂಹಲವನ್ನು ಹೊಂದಿರುತ್ತಾರೆ. 2025ರ ಭವಿಷ್ಯದ ಜಾತಕದ ಆಧಾರದ ಮೇಲೆ, ಹೊಸ ವರ್ಷವು ಕೆಲವು ರಾಶಿಚಕ್ರ ಚಿಹ್ನೆಗಳಿಗೆ ಒಳ್ಳೆಯ ದಿನಗಳನ್ನು ತಂದುಕೊಡಲಿದೆ. ಯಾವ ನಕ್ಷತ್ರದವರಿಗೆ ಹೊಸ ವರ್ಷದಲ್ಲಿ ರಾಜಯೋಗ ಬರಲಿದೆ ಎಂಬುದನ್ನು ನಾವೀಗ ತಿಳಿಯೋಣ.
ರೋಹಿಣಿ ನಕ್ಷತ್ರದ ಅಡಿಯಲ್ಲಿ ಜನಿಸಿದವರು 2025 ವರ್ಷದುದ್ದಕ್ಕೂ ಅಪಾರ ಪ್ರಯೋಜನಗಳನ್ನು ಪಡೆಯುತ್ತಾರೆ. ಅವರು ಈ ವರ್ಷ ವ್ಯಾಪಾರ ಮತ್ತು ವೃತ್ತಿಯಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುತ್ತಾರೆ. ಅಲ್ಲದೆ, ಅವರ ಆರ್ಥಿಕ ಪರಿಸ್ಥಿತಿಯಲ್ಲಿ ಭಾರಿ ಬದಲಾವಣೆಯಾಗಲಿದೆ. 2025ರಲ್ಲಿ ಅವರಿಗೆ ಹಣದ ಕೊರತೆ ಇರುವುದಿಲ್ಲ. ದೀರ್ಘಕಾಲದಿಂದ ಬಾಕಿ ಉಳಿದಿರುವ ಸಮಸ್ಯೆಗಳು ಬಗೆಹರಿದು, ಉತ್ತಮ ಪರಿಹಾರಗಳನ್ನು ಪಡೆಯುತ್ತಾರೆ.
ಕೃತಿಕಾ ನಕ್ಷತ್ರದಲ್ಲಿ ಜನಿಸಿದವರಿಗೆ 2025 ಜೀವನದಲ್ಲಿ ಒಂದು ದೊಡ್ಡ ತಿರುವು ತರುತ್ತದೆ. ಕೌಟುಂಬಿಕ ಜೀವನ ಮತ್ತು ಹಣಕಾಸಿನ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ಜೀವನವು ತ್ವರಿತ ಗತಿಯಲ್ಲಿ ಮುಂದುವರಿಯುತ್ತದೆ. ತಮ್ಮ ಮಕ್ಕಳಿಂದ ಒಳ್ಳೆಯ ಸುದ್ದಿಯನ್ನು ಸ್ವೀಕರಿಸುತ್ತಾರೆ. ವಿದೇಶ ಪ್ರವಾಸಕ್ಕೆ ಅವಕಾಶ ಸಿಗಲಿದೆ. ಅಲ್ಲದೆ, ವೃತ್ತಿಜೀವನದ ವಿಷಯದಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಸಹ ಪಡೆಯುತ್ತಾರೆ.
ಈ ನಕ್ಷತ್ರದಲ್ಲಿ ಜನಿಸಿದವರು 2025ರಲ್ಲಿ ಐಷಾರಾಮಿ ಜೀವನವನ್ನು ನಡೆಸುವ ಅದೃಷ್ಟವನ್ನು ಹೊಂದಿರುತ್ತಾರೆ. ಹೊಸ ವೃತ್ತಿ ಅಥವಾ ವ್ಯವಹಾರವನ್ನು ಪ್ರಾರಂಭಿಸಲು ಅವಕಾಶವಿರುತ್ತದೆ. ವಿವಿಧ ರೀತಿಯಲ್ಲಿ ಆದಾಯ ಗಳಿಸಲು ಅವಕಾಶವಿರುತ್ತದೆ. ಈ ಅವಧಿಯು ಜೀವನದಲ್ಲಿ ಮಹತ್ವದ ಸಂಗತಿಗಳು ಸಂಭವಿಸುವ ಸುವರ್ಣ ಸಮಯವಾಗಿರುತ್ತದೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ ವಿಜಯವಾಣಿ ಡಾಟ್ ನೆಟ್ ಸೈಟ್ ಜವಾಬ್ದಾರರಾಗಿರುವುದಿಲ್ಲ.