ನವದೆಹಲಿ: ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬಿ.ಎಸ್. ಯಡಿಯೂರಪ್ಪ ಜೀ ಅವರು ಕರ್ನಾಟಕದ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ರೈತರ ಕಲ್ಯಾಣ ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಶ್ರಮಜೀವಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದಾರೆ.
ಬಿ.ಎಸ್.ಯಡಿಯೂರಪ್ಪನವರು ಮೊನ್ನೆ ಫೆ.25ರಂದು ದೆಹಲಿಗೆ ತೆರಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.