ಬೆಂಗಳೂರು: ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ ಎಂದು ಡಿಸಿಎಂ DK ಶಿವಕುಮಾರ್ ಹೇಳಿದರು.
ಇದನ್ನೂ ಓದಿ:ಬಿಸಿ ನೀರಿನಲ್ಲಿ ಕಾಲಿಡುವುದರಿಂದ ಮೈಗ್ರೇನ್ ನಿವಾರಣೆ ಸಾಧ್ಯ; ವೈದ್ಯರು ಈ ಬಗ್ಗೆ ಹೇಳುವುದೇನು? | Health Tips
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯಿಸಿದರು. ನಾವೇನು ಈಗ ಬೆಲೆ ಏರಿಕೆ ಮಾಡಿಲ್ಲ. ಅವರು ಬೆಲೆ ಏರಿಕೆ ಮಾಡಿದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು. ರೈತರಿಗೆ ಸಹಾಯವಾಗಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗಿಂತ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಸೈಫ್ಗೆ ಚಾಕು ಇರಿತ ಪ್ರಕರಣ : ದಾಳಿ ಬಗ್ಗೆ ಮೌನ ಮುರಿದ ಸಹೋದರಿ ಸೋಹ ಅಲಿಖಾನ್: ಹೇಳಿದ್ದೇನು? | Soha Ali Khan
ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ಅನುದಾನ ಬಿಡುಗಡೆ ವಿಚಾರವನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಇಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವರು ತಿಳಿಸಿದ್ದಾರೆ.ನಾವು ಭದ್ರಾ ಯೋಜನೆಗೆ ಎಷ್ಟು ಖರ್ಚು ಮಾಡಿದ್ದೇವೆ, ಕೇಂದ್ರ ಎಷ್ಟು ಕೊಡಬೇಕು ಎಂಬುದನ್ನೂ ತಿಳಿಸಿದ್ದೇವೆ. ದೆಹಲಿ ಭೇಟಿ ವೇಳೆ ಕೇಂದ್ರ ಜಲಶಕ್ತಿ ಸಚಿವರನ್ನು ನಾನು ಹಾಗೂ ಮುಖ್ಯಮಂತ್ರಿಯವರು ಭೇಟಿ ಮಾಡಿ ರಾಜ್ಯದ ನೀರಾವರಿ ಸಂಬಂಧಿತ ವಿಚಾರಗಳನ್ನು ಚರ್ಚೆ ಮಾಡಿದೆವು. ಮಹದಾಯಿ, ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ವಿಚಾರಗಳನ್ನು ಮನವರಿಕೆ ಮಾಡಿದ್ದೇವೆ. ನಮ್ಮ ಸಮಸ್ಯೆಗಳು ಅವರಿಗೆ ಅರ್ಥವಾಗಿದೆ. ಈ ವಿಚಾರವಾಗಿ ಒಬ್ಬೊಬ್ಬರನ್ನೇ ಕರೆಸಿ ಮಾತುಕಥೆ ನಡೆಸುವುದಾಗಿ ತಿಳಿಸಿದ್ದಾರೆ ಎಂದರು.