ನ್ಯೂಸ್

ಲೋಕಸಭೆ ಚುನಾವಣೆಗೆ ಮುನ್ನ 4 ರಾಜ್ಯಗಳಲ್ಲಿ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

ನವದೆಹಲಿ: ಪ್ರಮುಖ ರಾಜ್ಯ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಿಸಿದೆ.

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ.

ಜಾಖರ್ ಈ ಹಿಂದೆ ಪಂಜಾಬ್‌ನಲ್ಲಿ ಕಾಂಗ್ರೆಸ್‌ನ ರಾಜ್ಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ತೆಲಂಗಾಣದಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಈಟಾಲ ರಾಜೇಂದರ್ ಅವರನ್ನು ನೇಮಿಸುವುದಾಗಿ ಬಿಜೆಪಿ ಘೋಷಿಸಿದೆ.