ನ್ಯೂಸ್

ಪ್ರಧಾನಿ ಮೋದಿ ತಾಯಿ ಬಗ್ಗೆ ಅವಹೇಳನಕಾರಿ ಹೇಳಿಕೆ: ರಾಹುಲ್​ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ|BJP

BJP: ಬಿಹಾರದ ದರ್ಭಾಂಗದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿದ ರಾಹುಲ್ ಗಾಂಧಿ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಕಟುವಾಗಿ ಟೀಕಿಸಿದೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಬಿಹಾರದ ದರ್ಭಾಂಗಾದಲ್ಲಿ ನಡೆದ ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಯಾತ್ರೆಯ ವೇದಿಕೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ದಿವಂಗತ ತಾಯಿಯ ವಿರುದ್ಧ ಅತ್ಯಂತ ಅಸಭ್ಯ ಭಾಷೆಯನ್ನು ಬಳಸಿದ್ದಾರೆ. ಇದನ್ನು ಪುನರಾವರ್ತಿಸಲು ಸಹ ಸಾಧ್ಯವಿಲ್ಲ.ಅಲ್ಲದೆ ರಾಜಕೀಯದಲ್ಲಿ ಇಂತಹ ದುಷ್ಕೃತ್ಯವನ್ನು ಹಿಂದೆಂದೂ ನೋಡಿರಲಿಲ್ಲ. ಈ ಯಾತ್ರೆಯೂ ಅವಮಾನ, ದ್ವೇಷ ಮತ್ತು ಅಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದೆ ಎಂದು ಬಿಜೆಪಿ ತಿಳಿಸಿದೆ.

ಅಲ್ಲದೆ, ತೇಜಸ್ವಿ ಯಾದವ್ ಮತ್ತು ರಾಹುಲ್ ಗಾಂಧಿ ಬಿಹಾರದ ಜನರನ್ನು ಅವಮಾನಿಸಿದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಮತ್ತು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಂತಹ ನಾಯಕರನ್ನು ತಮ್ಮ ಯಾತ್ರೆಗೆ ಆಹ್ವಾನಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

ಕಾಂಗ್ರೆಸ್​ ಈಗ, ಹತಾಶೆಯ ಸ್ಥಿತಿಯಲ್ಲಿದೆ. ಕಾಂಗ್ರೆಸ್​ ಪ್ರಧಾನಿ ಮೋದಿ ಅವರ ದಿವಂಗತ ತಾಯಿಯ ಮೇಲೆ ಜನರು ನಿಂದನೆ ಮಾಡುವಂತೆ ಮಾಡುತ್ತಿದ್ದಾರೆ. ಇದು ಎಂತಹ ತಪ್ಪೆಂದರೆ, ರಾಹುಲ್ ಮತ್ತು ತೇಜಸ್ವಿ ತಮ್ಮ ಕಿವಿಗಳನ್ನು ಹಿಡಿದುಕೊಂಡು ಸಾವಿರ ಬಾರಿ ಕ್ಷಮೆ ಯಾಚಿಸಿದರೂ, ಬಿಹಾರ ಜನರು ಅವರನ್ನು ಕ್ಷಮಿಸುವುದಿಲ್ಲ ಎಂದು ಬಿಜೆಪಿ ತಿಳಿಸಿದೆ.

ಈ ಘಟನೆಯ ಬಗ್ಗೆ ಮಾತನಾಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಶ್ವಾಸ್ ಕೈಲಾಶ್ ಸಾರಂಗ್, ಇಡೀ ಜಗತ್ತು ಪ್ರಧಾನಿ ಮೋದಿಯನ್ನು ಗೌರವಿಸುತ್ತದೆ. ರಾಹುಲ್ ಗಾಂಧಿ ಮೋದಿಯನ್ನು ಈ ರೀತಿ ಅವಮಾನಿಸುತ್ತಿದ್ದಾರೆ. ಗಾಂಧಿ ಸ್ವತಃ ಬಂದು ಸಾರ್ವಜನಿಕರಲ್ಲಿ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಚುನಾವಣಾ ಆಯೋಗ ಚುನಾವಣೆಗಳಲ್ಲಿ ಮತ ಕದಿಯಲು ಒಪ್ಪಂದ ಮಾಡಿಕೊಂಡಿವೆ ಎಂಬ ರಾಹುಲ್ ಗಾಂಧಿಯವರ ಆರೋಪಗಳನ್ನು ಮತ್ತಷ್ಟು ಹೆಚ್ಚಿಸಲು ಮತದಾರರ ಅಧಿಕಾರ ಯಾತ್ರೆಗೆ ಚಾಲನೆ ನೀಡಿತ್ತು. (ಏಜೆನ್ಸೀಸ್)