ಹುಬ್ಬಳ್ಳಿ: ಉತ್ತರ ಕರ್ನಾಟಕದ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರಿಗೆ ಆಸಕ್ತಿ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್(DK Shivakumar) ತಿಳಿಸಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾನಾಡಿದರು. ಅಧಿವೇಶನದಲ್ಲಿ ನಾಲ್ಕು ದಿನ ಬಾಕಿ ಇದ್ದು, ಉತ್ತರ ಕರ್ನಾಟಕದ ವಿಚಾರ ಚರ್ಚೆ ಬಗ್ಗೆ ಕೇಳಿದಾಗ, "ಅವರಿಗೆ ರಾಜಕಾರಣ ಹೊರತಾಗಿ ಬೇರೆ ವಿಚಾರ ಬೇಕಿಲ್ಲ. ಅವರ ಪಕ್ಷದಲ್ಲಿ ಒಗ್ಗಟ್ಟಿಲ್ಲ ಎಂದರು.
ಉತ್ತರ ಕರ್ನಾಟಕದ ನೀರಾವರಿ ವಿಚಾರವಾಗಿ ಚರ್ಚೆಯಾಗಬೇಕು ಎಂಬ ಪ್ರಶ್ನೆಗೆ, ನೀರಾವರಿ ವಿಚಾರವಾಗಿ ಚರ್ಚೆ ಮಾಡಲು ನಾನು ಸಿದ್ಧ. ನೀರಾವರಿ ಜತೆಗೆ ಬೇರೆ ವಿಚಾರಗಳೂ ಚರ್ಚೆಯಾಗಲಿ ಎಂದು ಉತ್ತರಿಸಿದರು.
ಇದನ್ನೂ ಓದಿ: ಟೆಕ್ಕಿ ಅತುಲ್ ಸುಭಾಷ್ ಆ*ಹತ್ಯೆ ಪ್ರಕರಣ: ಕೊನೆಗೂ ಖಾಕಿ ಖೆಡ್ದಾಗೆ ಬಿದ್ದ ಪತ್ನಿ ನಿಕಿತಾ ಸಿಂಘಾನಿಯ | Atul Subhash
ಮಹದಾಯಿ ಯೋಜನೆಗೆ ತಾರ್ಕಿಕ ಅಂತ್ಯ ಯಾವಾಗ ಎಂದು ಕೇಳಿದಾಗ, ಇತ್ತೀಚೆಗಷ್ಟೇ ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿದ್ದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನೂ ಭೇಟಿ ಮಾಡಿ ಚರ್ಚೆ ಮಾಡಿದೆ. ಅವರು ಕೂಡ ಅರಣ್ಯ ಸಚಿವರ ಜತೆ ಚರ್ಚೆ ಮಾಡಿರುವ ಬಗ್ಗೆ ತಿಳಿಸಿದರು. ಮಹದಾಯಿ ಯೋಜನೆ ಕಾಮಗಾರಿಗಳ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕೇಂದ್ರದ ಅನುಮತಿ ದೊರೆತ ತಕ್ಷಣ ಕೆಲಸ ಆರಂಭವಾಗುತ್ತದೆ. ಮೇಕೆದಾಟು ಯೋಜನೆ ವಿಚಾರವಾಗಿ ಸಂಭ್ರಮಾಚರಣೆ ಮಾಡಿದ್ದು ಜಗದೀಶ್ ಶೆಟ್ಟರ್ ಹಾಗೂ ಪ್ರಹ್ಲಾದ್ ಜೋಷಿ. ಹೀಗಾಗಿ ಅವರೇ ನೇತೃತ್ವ ವಹಿಸಿ ಈ ಯೋಜನೆಗೆ ಅನುಮತಿ ಕೊಡಿಸಬೇಕು. ಅವರು ಅರಣ್ಯ ಇಲಾಖೆ ಅನುಮತಿ ಕೊಡಿಸಲಿ ನಾವು ಕೆಲಸ ಆರಂಭಿಸುತ್ತೇವೆ. ಅನುಮತಿ ಸಿಗುವ ವಿಶ್ವಾಸ ಇದೆ ಎಂದು ತಿಳಿಸಿದರು.
ಇದನ್ನೂ ಓದಿ: ಈ ಗುಣಗಳಿರುವ ಹುಡುಗರು ತಮ್ಮ ಜೀವನದಲ್ಲಿ ಸಾಕಷ್ಟು ಹಣ ಗಳಿಸಿ ಬೇಗ ಶ್ರೀಮಂತರಾಗುತ್ತಾರೆ! Money Earning
ವಿಧಾನಸೌಧದಲ್ಲಿ ಕೋವಿಡ್ ಅಕ್ರಮದ ಬಗ್ಗೆ ಎಫ್ಐಆರ್ ದಾಖಲಾಗಿದ್ದು ಬಿಜೆಪಿ ನಾಯಕರ ಹೆಸರಿಲ್ಲ ಎಂಬ ಬಗ್ಗೆ ಕೇಳಿದಾಗ, "ನ್ಯಾ.ಕುನ್ಹಾ ಅವರ ಸಮಿತಿ ವರದಿ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಅವರ ಮೇಲೆ ಕೇಸು ದಾಖಲಿಸಲು ನಾವು ತನಿಖೆ ಮಾಡುತ್ತಿಲ್ಲ. ವರದಿ ಶಿಫಾರಸ್ಸಿನಂತೆ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳುತ್ತಿದ್ದು, ಅವರು ಅವರ ಕೆಲಸ ಮಾಡುತ್ತಾರೆ ನೋಡೋಣ" ಎಂದರು.