ನ್ಯೂಸ್

ಉತ್ತರ ಪ್ರದೇಶದಲ್ಲಿ ಬಿಜೆಪಿ ಒಂದು ಸ್ಥಾನ ಗೆಲ್ಲಲಿದೆ: ರಾಹುಲ್ ಗಾಂಧಿ ಭವಿಷ್ಯ

ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಕೇವಲ ಒಂದು ಸ್ಥಾನವನ್ನು ಗೆಲ್ಲುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಉಜ್ಜಯಿನಿ ಲೋಕಸಭಾ ಕ್ಷೇತ್ರದ ಇಂಡಿಯಾ ಮೈತ್ರಿಕೂಟ ಅಭ್ಯರ್ಥಿ ಪರ ಮತಯಾಚನೆಗೆ ಪ್ರಯಾಗರಾಜ್‌ನಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಮಾತನಾಡಿದರು.

ಉತ್ತರಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಕ್ಯೋಟೋ (ವಾರಣಾಸಿ) ಕ್ಷೇತ್ರವನ್ನು ಗೆಲ್ಲಲಿದ್ದಾರೆ. ವಾರಣಾಸಿಯನ್ನು ಜಪಾನ್‌ನ ಸುಂದರ ನಗರ ಕ್ಯೊಟೊ ರೀತಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಹೇಳಿದ್ದರು. ಇದನ್ನೂ ಉಲ್ಲೇಖಿಸಿದ ರಾಹುಲ್ ಗಾಂಧಿ ತಿರುಗೇಟು ನೀಡಿದರು.

ನಮ್ಮ ಮೊದಲ ಸಂಘರ್ಷವಾದ ಸಂವಿಧಾನ ಉಳಿವಿಗಾಗಿ. ಬಿಜೆಪಿ ಮತ್ತು ಆರೆಸ್ಸೆಸ್ ಅದರ ಮೇಲೆ ದಾಳಿ ಮಾಡುತ್ತಿವೆ. ಯಾವ ಶಕ್ತಿಯು ಸಂವಿಧಾನವನ್ನು ಹರಿದು ಬಿಸಾಕಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

"ನಾವು ಕೃಷಿ ಉತ್ಪನ್ನಗಳ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಾಗಿ ಕಾನೂನನ್ನು ತರಲಿದ್ದೇವೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಲಿದ್ದೇವೆ. ಅಗ್ನಿವೀರ್ ಯೋಜನೆಯನ್ನು ಕಸದ ಬಿಟ್ಟಿಗೆ ಎಸೆಯುತ್ತೇವೆ. ಸಶಸ್ತ್ರ ಪಡೆಗಳಲ್ಲಿ ನೇಮಕಾತಿಯನ್ನು ಒದಗಿಸುತ್ತೇವೆ ಎಂದು ಗಾಂಧಿ ಹೇಳಿದರು.