ಹಣ ಹಂಚಿಕೆ ಮಾಡುತ್ತಿರುವ ಮಹಿಳೆ 
ನ್ಯೂಸ್

ಶೆಟ್ಟರ್ ಜತೆ ಗುರುತಿಸಿಕೊಳ್ಳದಂತೆ ಪಕ್ಷದವರಿಗೆ ಬಿಜೆಪಿ ಹೈಕಮಾಂಡ್ ಸೂಚನೆ; ಜನ ಸೇರಿಸಲು ಪರದಾಟ?

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಿಲ್ಲ ಎಂದು ಮುನಿಸಿಕೊಂಡು ಇತ್ತೀಚೆಗಷ್ಟೇ ಬಿಜೆಪಿಯನ್ನು ತೊರೆದು ಕಾಂಗ್ರೆಸ್​ಗೆ ಸೇರ್ಪಡೆ ಆಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಜತೆ ಗುರುತಿಸಿಕೊಳ್ಳದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.

ಕೈ ಹಿಡಿದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಜಗದೀಶ ಶೆಟ್ಟರ ಇಂದು ಹುಬ್ಬಳ್ಳಿ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭಕ್ಕಾಗಿ ಶೆಟ್ಟರ್ ಕಡೆಯವರು ಜನ ಸೇರಿಸಲು ಪರದಾಡುವ ಪರಿಸ್ಥಿತಿ ಉಂಟಾಗಿತ್ತು ಎನ್ನಲಾಗಿದೆ.

ನಾಮಪತ್ರ ಸಲ್ಲಿಕೆ ವೇಳೆ ಜಗದೀಶ್ ಶೆಟ್ಟರ್ ರೋಡ್‌ ಶೋಗಾಗಿ ಕಾಂಗ್ರೆಸ್ ಮುಖಂಡರು ದುಡ್ಡು ಕೊಟ್ಟು ಜನರನ್ನು ಕರೆ ತಂದಿತ್ತು, ಹುಬ್ಬಳ್ಳಿ ಪಾಲಿಕೆ ಕಚೇರಿ ಎದುರೇ ಮಹಿಳೆಯರಿಗೆ ಹಣ ಹಂಚಿಕೆ ಮಾಡಿದ್ದು ಕಂಡುಬಂದಿದೆ. ಸಮೀಪದಲ್ಲಿ ಪೊಲೀಸರಿದ್ದರೂ ಅವರ ಸಮ್ಮುಖದಲ್ಲೇ ಮುಖಂಡರು ಹಣ ಹಂಚಿಕೆ ಮಾಡಿದ್ದ ವಿಡಿಯೋ ವೈರಲ್ ಆಗಲಾರಂಭಿಸಿದೆ.