ನ್ಯೂಸ್

ಬಿಜೆಪಿ ಧರ್ಮಸ್ಥಳದಲ್ಲಿ ಧರ್ಮಯಾತ್ರೆ ಅಲ್ಲ,ರಾಜಕೀಯ ಯಾತ್ರೆ ಮಾಡುತ್ತಿದೆ: CM ಸಿದ್ದರಾಮಯ್ಯ

ಮೈಸೂರು: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ(CM) ಸಿದ್ದರಾಮಯ್ಯ ಕುಟುಕಿದರು.
ಮೈಸೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ NIA ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ  ನಮ್ಮ ಪೊಲೀಸರ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲವೇ ಎಂದು CM ಪ್ರಶ್ನಿಸಿದರು. ಎಸ್ಐಟಿ ರಚನೆಯಾದ ಪ್ರಾರಂಭದಲ್ಲಿ ಎನ್ಐಎ ತನಿಖೆ ಮಾಡಿ ಎನ್ನಲಿಲ್ಲ. ನಂತರ  ದೇಹಗಳು ಸಿಗದೇ ಹೋದಾಗ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವತಃ ಸತ್ಯ ಹೊರಬರಲಿ ಎಂದು ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ. ನಮ್ಮ ಮೇಲಿನ ಅನುಮಾನದ ತೂಗುಗತ್ತಿ ನಿವಾರಣೆಯಾಗಬೇಕೆಂದಿದ್ದಾರೆ. ಎಸ್ಐಟಿ ತನಿಖೆ ಸ್ವತಂತ್ರವಾಗಿ ಮಾಡುತ್ತಿದ್ದು ನಾವ್ಯಾರು ಅದರಲ್ಲಿ ಹಸ್ತಕ್ಷೇಪ ಮಾಡಿಲ್ಲ. ಸತ್ಯ ಹೊರಬರಬೇಕು ಎಂದರು.

ಅಶೋಕ್ ಸದನದಲ್ಲಿ ಬೇರೆ ಚರ್ಚೆ ಮಾಡಿದ್ದರು

ಚಿನ್ನಯ್ಯ ಎಂಬ ವ್ಯಕ್ತಿಯನ್ನು ಕರೆತಂದಿರುವುದೇ ಕಾಂಗ್ರೆಸ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ಸದನದಲ್ಲಿ ಈ ಬಗ್ಗೆ ಚರ್ಚೆಯಾದಾಗ  ಬೇರೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್  ಹಾಗೂ ಶಾಸಕ ಸುನೀಲ್ ಕುಮಾರ್, ಈಗ ಬೇರೆ ಹೇಳುತ್ತಿದ್ದಾರೆ ಎಂದು ತಿಳಿಸಿದ  ಮುಖ್ಯಮಂತ್ರಿಗಳು ದಿನಕ್ಕೊಂದು ಹೇಳಿಕೆ ಕೊಡಬಾರದು. ಅಸತ್ಯದ ಮೇಲೆ ಚರ್ಚೆ ಮಾಡಿದರೆ ಹೀಗೆ ಆಗುವುದು ಎಂದರು.

ಸತ್ಯ ಗೊತ್ತಿದ್ದ ಮೇಲೆ ಮುಚ್ಚಿಡುವುದು ಅಪರಾಧ

12 ವರ್ಷಗಳ ಅಪಹರಣ ವಾಗಿರುವುದನ್ನು ಕಣ್ಣಾರೆ  ನೋಡಿದ್ದೇನೆ  ಎಂದು ಎಸ್ಐಟಿಗೆ ಮಹಿಳೆಯೊಬ್ಬರು ದೂರ ನೀಡಿರುವ ಬಗ್ಗೆ ಮಾತನಾಡಿ, ಇದನ್ನು  ಸಿಬಿಐ  ತನಿಖೆ ನಡೆದಾಗ  ಏಕೆ ಹೇಳಲಿಲ್ಲ? ಸತ್ಯ  ಗೊತ್ತಿದ್ದ ಮೇಲೆ, ಅದನ್ನು ಮುಚ್ಚಿಡುವುದು ಅಪರಾಧ ಎಂದರು.

ಹಿಂದುಗಳಾಗಿ ಎನ್ನುವುದು ತರವಲ್ಲ

ಬಾನು ಅವರು ಕುಂಕುಮ ಹಚ್ಚಿಕೊಂಡು ದಸರಾ ಉದ್ಘಾಟಸಲಿ ಎಂದು ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಮಾತನಾಡಿ ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡ ಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ , ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದರು. ಮುಸ್ಲಿಂ ಗುರುಗಳು ನಾನು ಮುಷ್ತಾಕ್ ಅವರ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.(ಏಜೆನ್ಸೀಸ್​)