ನವದೆಹಲಿ: ದೆಹಲಿ ಬಿಜೆಪಿಯ ಕಿಸಾನ್ ಮೋರ್ಚಾ ನಾಯಕನನ್ನು ದ್ವಾರಕಾದ ಬಿಂದಾಪುರ್ ಪ್ರದೇಶದಲ್ಲಿ ಶುಕ್ರವಾರ ಸಂಜೆ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಂದಾಪುರದಲ್ಲಿ ಗುಂಡಿನ ದಾಳಿ ನಡೆದಿದ್ದು, ಸುರೇಂದ್ರ ಮಟಿಯಾಲಾ (60) ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ಅವರು ತಮ್ಮ ಕಚೇರಿಯಲ್ಲಿ ಕುಳಿತಿದ್ದರು ಎಂದು ಉಪ ಪೊಲೀಸ್ ಆಯುಕ್ತ (ದ್ವಾರಕಾ) ಎಂ ಹರ್ಷ ವರ್ಧನ್ ತಿಳಿಸಿದ್ದಾರೆ.
"ಘಟನೆಯ ಸಮಯದಲ್ಲಿ ಮೃತರು ಕಚೇರಿಯಲ್ಲಿ ಕುಳಿತಿದ್ದರು. ಅವರು ಈ ಪ್ರದೇಶದಿಂದ ಕೌನ್ಸಿಲರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ದಾಳಿಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲವಾದರೂ, ಈ ವಿಷಯದ ಬಗ್ಗೆ ತನಿಖೆ ನಡೆಸಲು ಅನೇಕ ತಂಡಗಳನ್ನು ರಚಿಸಲಾಗಿದೆ. ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದೇವೆ" ಎಂದು ಉಪ ಪೊಲೀಸ್ ಆಯುಕ್ತ ಹರ್ಷವರ್ಧನ್ ಹೇಳಿದರು. (ಏಜೆನ್ಸೀಸ್)