ನ್ಯೂಸ್

ಯುವತಿ ಮೇಲೆ ಸಾಮೂಹಿಕ ದೌರ್ಜನ್ಯ ಎಸಗಿದ ಅಪ್ರಾಪ್ತ ವಯಸ್ಕರು; BJP ನಾಯಕನ ಪುತ್ರ ಸೇರಿದಂತೆ ಮೂವರು ವಶಕ್ಕೆ

ಲಖನೌ​: ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಸಮುದಾಯದ ಯುವತಿ(19) ಹಾಗೂ ಆಕೆಯ ಸಹೋದರಿಯ ಮೇಲೆ ಅಪ್ರಾಪ್ತ ವಯಸ್ಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ದಾಟಿಯಾ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ನಾಲ್ವರ ಪೈಕಿ ಮೂವರನ್ನು ಬಂಧಿಸಿದ್ದು, ಓರ್ವನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು, ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪ್ರಕರಣ ಸಂಬಂಧ FIR ಸಿದ್ದಪಡಿಸಲಾಗಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಲಾಗುವುದು ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಹುಡುಕಿಕೊಟ್ಟವರಿಗೆ ಬಹುಮಾನ

ಈ ಕುರಿತು ಪ್ರತಿಕ್ರಿಯಿಸಿರುವ ಉನ್ನಾವ್​ ಪೊಲೀಸ್​ ಠಾಣಾಧಿಕಾರಿ ಯಾದವೇಂದ್ರ ಸಿಂಗ್​ ಗುರ್ಜಾರ್​ ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೋರ್ವನನ್ನು ಪತ್ತೆ ಹಚ್ಚಲು ವಿಶೇಷ ತಂಡ ಒಂದನ್ನು ರಚಿಸಲಾಗಿದೆ. ಆತನನ್ನು ಹುಡುಕಿಕೊಟ್ಟವರಿಗೆ 10 ಸಾವಿರ ರೂಪಾಯಿ ಬಹುಮಾನವನ್ನು ಸಹ ಘೋಷಿಸಲಾಗಿದೆ.

ಬಂಧಿತ ಆರೋಪಿಗಳ ಪೈಕಿ ಬಿಜೆಪಿ ನಾಯಕರ ಪುತ್ರನಿದ್ದು, ಆತ ಸಹ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಈಗಾಗಲೇ FIR ಹಾಕಲಾಗಿದ್ದು, ಶೀಘ್ರದಲ್ಲೇ ಇನ್ನೋರ್ವ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಲಾಗುವುದು ಎಂದು ಉನ್ನಾವ್​ ಪೊಲೀಸ್​ ಠಾಣಾಧಿಕಾರಿ ಯಾದವೇಂದ್ರ ಸಿಂಗ್​ ಗುರ್ಜಾರ್ ತಿಳಿಸಿದ್ದಾರೆ.

ಘಟನೆಯ ಹಿನ್ನಲೆ

ಶನಿವಾರ ಮಧ್ಯಾಹ್ನ 19 ವರ್ಷದ ಯುವತಿ ಹಾಗೂ ಆಕೆಯ ಸಹೋದರಿಯನ್ನು ನಾಲ್ವರು ಅಪಹರಿಸಿ ಮನೆಯೊಂದರಲ್ಲಿ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಸಿ ಕಳುಹಿಸಿದ್ದಾರೆ. ಮನೆಗೆ ಬಂದ ಬಳಿಕ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದು, ಇದನ್ನು ನೋಡಿದ ಆಕೆಯ ಕುಟುಂಬಸ್ಥರು ತಕ್ಷಣವೇ ಅವಳನ್ನು ಆಸ್ಪತ್ರೆಗೆ ಸೇರಿಸಿ ಬದುಕಿಸಿದ್ದಾರೆ.

ಈ ಸಂಬಂಧ ಪೊಲೀಸರು ಈಗಾಗಲೇ ಯುವತಿಯ ಸಹೋದರಿಯ ಹೇಳಿಕೆಯನ್ನು ಪಡೆದಿದ್ದು, ಸಂತ್ರಸ್ತೆ ಗುಣಮುಖಳಾದ ನಂತರ ವಿಚಾರಣೆ ನಡೆಸಿ ಚಾರ್ಜ್​ಶೀಟ್​ ಸಿದ್ದಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.