ವಿಜಯಪುರ : ByElection Result ಉಪಚುನಾವಣೆಯಲ್ಲಿ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ಕ್ಷೇತ್ರಗಳಲ್ಲೂ ಜನರು ‘ಕೈ’ ಹಿಡಿದಿದ್ದಾರೆ. ಜನ ಬೆಂಬಲಕ್ಕೆ ಕಾಂಗ್ರೆಸ್ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭಿಮಾನಿ ಟಿವಿ ಒಡೆದು ಹಾಕಿ ಆಕ್ರೋಶ ಹೊರ ಹಾಕಿದ್ದಾನೆ.
ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಬಿಜೆಪಿ ಸೋಲನ್ನು ಸಹಿಸದ ಬಿಜೆಪಿ ನಿಷ್ಠಾವಂತ ಅಭಿಮಾನಿಯಿಂದ ಮನೆಯಲ್ಲಿನ ಟಿವಿ ಒಡೆದು ಹಾಕಿದ್ದಾನೆ. ವಿಜಯಪುರ ಜಿಲ್ಲೆ ಕೋಲ್ಹಾರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ವೀರಭದ್ರಪ್ಪ ಭಾಗಿ ಟಿವಿ ಒಡೆದು ಆಕ್ರೋಶ ಹೊರ ಹಾಕಿದ ಬಿಜೆಪಿ ಅಭಿಮಾನಿ. ನಾಯಕರ ನಡುವಿನ ಬಿರುಕಿಗೆ ಬಿಜೆಪಿ ನಾಯಕರಲ್ಲಿ ಒಗ್ಗಟಿನ ಕೊರತೆಯಿಂದ ಹೀನಾಯ ಸೋಲಿಗೆ ಕಾರಣ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. ಇತ್ತ ಚನ್ನಪಟ್ಟಣದಲ್ಲಿ ‘ಕೈ’ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿಗೆ ಸನಿಹವಿದ್ದಾರೆ. ಶಿಗ್ಗಾಂವಿಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಜಯ ಸಾಧಿಸಿದ್ದಾರೆ.
ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಣಕ್ಕಿಳಿದಿದ್ದ ಸಿ.ಪಿ ಯೋಗೇಶ್ವರ್, 1,12,388 ಮತಗಳನ್ನು ಸ್ವೀಕರಿಸಿದ್ದರೆ, ನಿಖಿಲ್ 87,031 ಮತಗಳನ್ನು ಪಡೆದುಕೊಂಡಿದ್ದಾರೆ. ಒಟ್ಟಾರೆ ಸಿಪಿವೈ 25,357 ಮತಗಳ ಅಂತರದಿಂದ ಮುನ್ನಡೆ ದಾಖಲಿಸಿದ್ದಾರೆ.
ಸಂಡೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಬಂಗಾರು ಹನುಮಂತುಗೆ 83,961 ಮತಗಳು ಲಭಿಸಿದರೆ, ಅನ್ನಪೂರ್ಣಗೆ 93.606 ಮತಗಳು ಸಿಕ್ಕಿವೆ. ಬಿಜೆಪಿ ವಿರುದ್ಧ ಭರ್ಜರಿ ಪೈಪೋಟಿ ಕೊಟ್ಟ ಅನ್ನಪೂರ್ಣ ತುಕಾರಾಮ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಶಿಗ್ಗಾಂವಿಯಲ್ಲಿ ಮೈತ್ರಿ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ಧ ಸ್ಪರ್ಧೆಗಿಳಿದಿದ್ದ ಯಾಸಿರ್ ಪಠಾಣ್ 1,00,587 ಮತಗಳನ್ನು ಸ್ವೀಕರಿಸಿದರೆ, ಭರತ್ 86,960 ಮತಗಳನ್ನು ಪಡೆದುಕೊಂಡಿದ್ದಾರೆ. 13,448 ಮತಗಳಿಂದ ಪಠಾಣ್ ಮುನ್ನಡೆ ಕಾಯ್ದುಕೊಂಡು, ಇದೀಗ ಉಪಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ. ಈ ಮೂಲಕ ಮೂರು ಕ್ಷೇತ್ರಗಳಲ್ಲಿಯೂ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್, ಪಕ್ಷದ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ಬೈಎಲೆಕ್ಷನ್ ಗೆಲುವನ್ನು ಮುಂದಿಟ್ಟು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಮಾಡಿದ್ದ ಆರೋಪ, ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ