ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಭಾರಿ ಪ್ರಚಾರದಲ್ಲಿ ತೊಡಗಿಕೊಂಡಿರುವ ಬಿಜೆಪಿ ಇದೀಗ ಎರಡು ದಿನಗಳ ಮಹಾಪ್ರಚಾರ ಅಭಿಯಾನಕ್ಕೆ ಮುಂದಾಗಿದೆ. ನಾಳೆ-ನಾಡಿದ್ದು ಈ ಮಹಾಪ್ರಚಾರ ಅಭಿಯಾನ ನಡೆಯಲಿದೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ನಾಳೆ ಏಕಕಾಲದಲ್ಲಿ ಸುದ್ದಿಗೋಷ್ಠಿ ನಡೆಯಲಿದ್ದು, ಏಕಕಾಲಕ್ಕೆ 224 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಅಭಿಯಾನ ನಡೆಯಲಿದೆ. ಅಲ್ಲದೆ ಹೋಬಳಿ ಮತ್ತು ತಾಲೂಕು ಕೇಂದ್ರಗಳಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಗಳು ನಡೆಯಲಿವೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ, ಕೇಂದ್ರ ಗೃಹಸಚಿವ ಅಮಿತ್ ಶಾ, ಯೋಗಿ ಆದಿತ್ಯನಾಥ್, ರಾಜ್ನಾಥ್ ಸಿಂಗ್, ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ್, ನಿರ್ಮಲಾ ಸೀತಾರಾಮನ್, ಮನಸುಖ್ ಮಾಂಡವೀಯ ಸೇರಿದಂತೆ 98 ರಾಷ್ಟ್ರೀಯ ನಾಯಕರು, 150 ರಾಜ್ಯಮಟ್ಟದ ನಾಯಕರು ಈ ಮಹಾಪ್ರಚಾರ ಅಭಿಯಾನದಲ್ಲಿ ಪಾಲ್ಗೊಳ್ಳಲಿರುವರು. ಜೊತೆಗೆ ಮನೆಮನೆ ಸಂಪರ್ಕ ಕಾರ್ಯಕ್ರಮವೂ ಇರಲಿದೆ.