ನ್ಯೂಸ್

ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ | Congress insult to women

ಮೃತ್ಯುಂಜಯ ಕಪಗಲ್

ಬೆಂಗಳೂರು: ತಾಯಂದಿರಿಗೆ ಅಪಮಾನಿಸುವಂತಹ ಕೀಳುಮಟ್ಟದ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ನೀಡಿ, ರಾಜಕಾರಣವನ್ನು ಕುಲಗೆಡಿಸುತ್ತಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ, ಪದಾಧಿಕಾರಿಗಳು, ಕಾರ್ಯಕರ್ತರು ೋಷಣಾ ಲಕಗಳನ್ನು ಪ್ರದರ್ಶಿಸಿ ಧಿಕ್ಕಾರ ಮೊಳಗಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ತಾಯಿಗೆ ಅವಹೇಳನ ಮಾಡಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಜನನಿ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳು ಖಂಡಿತ ಶೋಭೆ ತರುವುದಿಲ್ಲ. ರಾಜಕಾರಣವನ್ನು ಕೆಳದರ್ಜೆಗೆ ಇಳಿಸುವಂತಹ ವರ್ತನೆ ಸಹಿಸಲಾಗದು. ರಾಹುಲ್ ಗಾಂಧಿ ಕ್ಷಮೆ ಕೇಳದಿದ್ದರೆ ಚಳವಳಿ ಜಿಲ್ಲಾ ಹಂತಕ್ಕೂ ಕೊಂಡೊಯ್ಯುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.