ನ್ಯೂಸ್

ಬಿಜೆಪಿಯ ಶಾಸಕ ಸುರೇಶ್ ಕುಮಾರ್ ಆಸ್ಪತ್ರೆಯಿಂದ ಬಿಡುಗಡೆ!

Webdesk - Mallikarjun K R

ಬೆಂಗಳೂರು: ರೂಪಾಂತರಿ ಚಿಕನ್ ಗುನ್ಯಾ ಸೋಂಕು ತಗುಲಿದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಹಾಗೂ ರಾಜಾಜಿನಗರದ ಶಾಸಕ ಎಸ್​ ಸುರೇಶ್​ ಕುಮಾರ್ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ.

ರೂಪಾಂತರಿ ಚಿಕನ್ ಗುನ್ಯಾ ಸೋಂಕು ತಗುಲಿದ ಕಾರಣ ಸುರೇಶ್ ಕುಮಾರ್ ಕೆಲ ದಿನಗಳ ಹಿಂದೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಐಸಿಯು ಘಟಕದಲ್ಲಿ ಸುರೇಶ್ ಕುಮಾರ್‌ಗೆ ಚಿಕಿತ್ಸೆ ನೀಡಿದ್ದಾರೆ. ಈಗ ಸುರೇಶ್ ಕುಮಾರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

ತಮ್ಮ ಆರೋಗ್ಯದ ಸಂಬಂಧ ವದಂತಿ ಹಬ್ಬಿದ ಹಿನ್ನೆಲೆ ಸುರೇಶ್ ಕುಮಾರ್ ಅವರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

ನಾನು ಆರೋಗ್ಯವಾಗಿದ್ದೇನೆ. ಚಿಕನ್ ಗುನ್ಯಾ ನನ್ನನ್ನು ಕೆಲ ದಿನಗಳಿಂದ ಭಾದಿಸುತ್ತಿದ್ದು, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಚೇತರಿಕೆ ಕಂಡಿದ್ದು, ಗುಣಮುಖರಾಗಿದ್ದೇನೆ. ಹಾಗೂ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ ಎಂದು ಎಂದಿದ್ದಾರೆ.