ನ್ಯೂಸ್

ವಿಧಾನಪರಿಷತ್​ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ನವದೆಹಲಿ: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್​ಗೆ ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ. 

ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್​ ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಚಾನ್ಸ್ ಕೊಟ್ಟರೆ, ಸಿಟಿ ರವಿ ಅವರಿಗೆ ಬಂಪರ್ ಗಿಫ್ಟ್​ ಕೊಟ್ಟಿದೆ.