ನ್ಯೂಸ್

ATM ಸರ್ಕಾರ ತನ್ನ ತಪ್ಪುಗಳ ಬಗ್ಗೆ ಪ್ರಶ್ನಿಸುವವರನ್ನು ಶಿಕ್ಷಿಸಲು ಸದಾ ಸಿದ್ದವಾಗಿರುತ್ತದೆ: ಕಾಂಗ್ರೆಸ್​​​​​​​​​​​ಗೆ ಚಾಟಿ ಬೀಸಿದ ಬಿಜೆಪಿ

Webdesk - Manjunatha B

ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ಬಿಲ್​ಅನ್ನು ಪಾವತಿಸುವಂತೆ ಆಗ್ರಹಿಸಿ ಸರ್ಕಾದರ ಮೇಲೆ ಒತ್ತಡ ಹೇರಿದ ಗುತ್ತಿಗೆದಾರರ ವಿರುದ್ಧ FIR ದಾಖಲಿಸಿರುವುದನ್ನು ರಾಜ್ಯ ಬಿಜೆಪಿ ಘಟಕ ಖಂಡಿಸಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದೆ.

ಭ್ರಷ್ಟಾಚಾರದ ಆರೋಪದಡಿ ಸೂಕ್ತ ಸಾಕ್ಷಿಗಳು ದೊರೆತರೂ, ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವ ಎಟಿಎಂ ಸರ್ಕಾರ, ತನ್ನ ತಪ್ಪುಗಳ ಬಗ್ಗೆ ಪ್ರಶ್ನಿಸುವವರನ್ನು ಶಿಕ್ಷಿಸಲು ಸದಾ ಸಿದ್ದವಾಗಿರುತ್ತದೆ. ಸರ್ಕಾರದ ಜನವಿರೋಧಿ ನೀತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವವರ ಮೇಲೆ ಎಫ್.ಐ.ಆರ್ ಮಾಡಿದ್ದಾಯ್ತು ಎಂದು ಕಿಡಿಕಾರಿದೆ.

ಈಗ ಸರ್ಕಾರದ ಲಂಚಗುಳಿತನವನ್ನು ಬಹಿರಂಗಪಡಿಸಿದರು ಎಂಬ ಕಾರಣಕ್ಕೆ ಗುತ್ತಿಗೆದಾರರ ವಿರುದ್ಧ ಸಹ ಎಫ್.ಐ.ಆರ್ ದಾಖಲಿಸಿ ತನ್ನ ದ್ವೇಷದ ರಾಜಕಾರಣವನ್ನು ಪ್ರದರ್ಶಿಸುತ್ತಿದೆ. ಸರ್ಕಾರದ ಈ ಭಂಡತನಕ್ಕೆ ಕೊನೆ ಯಾವಾಗ ಎಂದು ಪ್ರಶ್ನಿಸಿದೆ.

ಅಭಿವೃದ್ದಿ ರಿವರ್ಸ್​ ಗೇರ್​ನಲ್ಲಿದೆ

ರಾಜ್ಯ ಎಟಿಎಂ ಸರ್ಕಾರದಲ್ಲಿ ಶಾಸಕ-ಸಚಿವರ ಒಳಜಗಳಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಸ್ವಪಕ್ಷೀಯ ಶಾಸಕರನ್ನೇ ನಿರ್ಲಕ್ಷಿಸುವ ಸಚಿವರುಗಳು, ಇನ್ನು ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾರೆಯೇ ಎಂದು ಬಿಜೆಪಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದೆ.

ಭ್ರಷ್ಟಾಚಾರ, ವರ್ಗಾವಣೆ ದಂಧೆ, ಒಳಜಗಳ, ಕುರ್ಚಿ ತಿಕ್ಕಾಟ, ಹೀಗೆ ಕಾಂಗ್ರೆಸ್​ ಸರ್ಕಾರದ ಸಾಲು ಸಾಲು ವೈಫಲ್ಯಗಳು ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ ಗೇರ್‌ನಲ್ಲಿರಿಸಿದೆ ಎಂದು ರಾಜ್ಯ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಹರಿಹಾಯ್ದಿದೆ.